ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಮತ್ತಷ್ಟು ಇಳಿಕೆ
ನವದೆಹಲಿ, ಮೇ 28: ಭಾರತದಲ್ಲಿ ಕೊರೊನಾ ಸೋಂಕಿನ ಆರ್ಭಟ ಕ್ರಮೇಣವಾಗಿ ಕಡಿಮೆ ಆಗುತ್ತಿದೆ.
ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೊನಾ ಪ್ರಕರಣ ಭಾರೀ ಸಂಖ್ಯೆಯಲ್ಲಿ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,59,459 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,48,93,410ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 20,70,508 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 33,90,39,861 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇನ್ನು ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3,18,895ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,86,364 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,75,55,457ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,43,152ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 20,57,20,660 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.












Click it and Unblock the Notifications