ಭಾರತಕ್ಕೆ ಶುಭ ಸುದ್ದಿ: ಭಾರೀ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ, ಮೇ 25: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 1,96,427 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3,511 ಮಂದಿ ಮೃತಪಟ್ಟಿದ್ದು, ಸೋಮವಾರ ಒಂದೇ ದಿನ 3,26,850 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಹಾಗೆಯೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದ್ದು, ಇದುವರೆಗೆ ದೇಶದಲ್ಲಿ 2,40,54,861 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ಹೊಸ ಸೋಂಕಿತರ ಭಾರೀ ಇಳಿಕೆ ಕಾಣುತ್ತಿರುವುದು ದೇಶದ ಜನ ತುಸು ನಿಟ್ಟುಸಿರು ಬಿಡುವಂತಾಗಿದೆ.

ಇಲ್ಲಿಯವರೆಗೆ 3,07,231 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಹಾಗೂ ಇನ್ನೂ 25,86,782 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇದುವರೆಗೆ 19,85,38,999 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

1,96,427 New Covid-19 Positive Cases Reported In Last 24 Hours In India

ಇದುವರೆಗೆ ಒಟ್ಟು 33,25,94,176 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಸೋಮವಾರ ಒಂದೇ ದಿನ 20,58,112 ಮಾದರಿಯಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+