Bihar Polls: ಎನ್ಡಿಎ ಪ್ರಣಾಳಿಕೆ ಬಿಡುಗಡೆ; ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ
ಪಾಟ್ನಾ, ಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಮುಹೂರ್ತ ಫಿಕ್ಸ್ ಮಾಡಿದೆ. ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಚುನಾವಣಾ ಕಣ ಸಜ್ಜಾಗಿದೆ. ಇತ್ತ ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ಗ್ಯಾರಂಟಿಯನ್ನ ರಾಜಕೀಯ ಪಕ್ಷಗಳು ನೀಡುತ್ತಿದ್ದು, ಇಂದು ಎನ್ಡಿಎ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಇಂದು ಬಿಜೆಪಿ ರಾಷ್ಟ್ರಧ್ಯಕ್ಷರಾದ ಜೆ ಪಿ ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಎನ್‌ಡಿಎ ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ.
ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಎನ್‌ಡಿಎ ಅಧಿಕಾರಕ್ಕೆ ಬಂದರೆ, ವಿಶ್ವ ದರ್ಜೆಯ ವೈದ್ಯಕೀಯ ಕೇಂದ್ರ, ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಉಚಿತ ಪಡಿತರ, 5 ಲಕ್ಷ ರೂ. ಮೌಲ್ಯದ ಉಚಿತ ಚಿಕಿತ್ಸೆ ಮತ್ತು 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಸ್ಥಾಪಿಸುವುದಾಗಿ 69 ಪುಟಗಳ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕಗಳು ಮತ್ತು 10 ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.ಉಚಿತ ಪಡಿತರ, 125 ಯೂನಿಟ್ ಉಚಿತ ವಿದ್ಯುತ್, 5 ಲಕ್ಷದವರೆಗೆ ಉಚಿತ ಚಿಕಿತ್ಸೆ, 50 ಲಕ್ಷ ಹೊಸ ಪಕ್ಕಾ ಮನೆಗಳು, ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುವುದು.ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಇನ್ನೂ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಪೌಷ್ಟಿಕ ಉಪಹಾರ ಮತ್ತು ಆಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ಒದಗಿಸಲಾಗುವುದು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಎಲ್ಲಾ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೀಡಲಾಗುವುದು. ಆಟೋ-ಟ್ಯಾಕ್ಸಿ-ಇ-ರಿಕ್ಷಾ ಚಾಲಕರಿಗೆ 4 ಲಕ್ಷ ರೂಪಾಯಿಗಳ ಜೀವ ವಿಮೆ ನೀಡಲಾಗುವುದು. ಐದು ವರ್ಷಗಳಲ್ಲಿ ಬಿಹಾರ ಪ್ರವಾಹ ಮುಕ್ತವಾಗಲಿದೆ ಎಂಬುದನ್ನು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.












Click it and Unblock the Notifications