ಭಾರತದಲ್ಲಿ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು
ನವದೆಹಲಿ, ಫೆಬ್ರವರಿ.19: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗವೇ ಹೊಸ ದಾಖಲೆ ಬರೆದಿದೆ. ಒಟ್ಟು 34 ದಿನಗಳಲ್ಲಿ 1,01,88,007 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
62,60,242 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,10,899 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 33,16,866 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಅತಿಹೆಚ್ಚು ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 10,70,895
ಮಹಾರಾಷ್ಟ್ರ - 8,39,566
ಗುಜರಾತ್ - 8,39,199
ರಾಜಸ್ಥಾನ - 7,62,913
ಮಧ್ಯಪ್ರದೇಶ - 6,11,640












Click it and Unblock the Notifications