• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರಧಾನಿ ಮೋದಿ ಹುಟ್ಟುಹಬ್ಬ: ಅರ್ಧ ದಿನದಲ್ಲೇ 1 ಕೋಟಿಗೂ ಅಧಿಕ ಲಸಿಕೆ ವಿತರಣೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 17: ದೇಶದಲ್ಲಿ ಅರ್ಧ ದಿನದಲ್ಲೇ 1 ಕೋಟಿಗೂ ಅಧಿಕ ಕೊರೊನಾ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಇಂದು ಮಧ್ಯಾಹ್ನ 1-30ರವರೆಗೆ ದೇಶದಲ್ಲಿ ಸುಮಾರು 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 71 ಜನ್ಮ ದಿನಾಚರಣೆ ಸಂದರ್ಭದಲ್ಲಿ 2 ಕೋಟಿ ಲಸಿಕೆ ನೀಡುವ ಗುರಿಯೊಂದಿಗೆ ದೇಶಾದ್ಯಂತ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪತ್ತೆಗಾಗಿ ಟಿಕ್ಕರ್ ಒಂದನ್ನು ಸರ್ಕಾರ ಸೇರ್ಪಡೆ ಮಾಡಿದೆ.

ದೇಶಾದ್ಯಂತ ತಗ್ಗುವ ಹಾದಿಯಲ್ಲಿದೆ ಕೊರೊನಾ; ಕೇಂದ್ರದೇಶಾದ್ಯಂತ ತಗ್ಗುವ ಹಾದಿಯಲ್ಲಿದೆ ಕೊರೊನಾ; ಕೇಂದ್ರ

ಕೋವಿಡ್-19 ಸಾಂಕ್ರಾಮಿಕ ವಿರುದ್ಧ ದೇಶದಲ್ಲಿ ಲಸಿಕೆ ಹಾಕುವವರ ಅವಿರತ ಶ್ರಮವನ್ನು ಕೊಂಡಾಡುತ್ತಿದ್ದು, ನೈಜ ಸಮಯದಲ್ಲಿ ಲಸಿಕೆ ಹಾಕುವುದನ್ನು ತೋರಿಸಲು ನಾವು ಟಿಕ್ಕರ್ ವೊಂದನ್ನು ಸೇರಿಸಿದ್ದೇವೆ. ಪ್ರಸ್ತುತ ನಾವು ಪ್ರತಿ ನಿಮಿಷಕ್ಕೆ 42 ಸಾವಿರ ಅಥವಾ ಸೆಕೆಂಡ್ ಗೆ 700 ಲಸಿಕೆ ನೀಡಲು ಎದುರು ನೋಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್ ಎಸ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 17 ರಂದು ಒಂದೇ ದಿನ 88.13 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈವರೆಗೂ ಇದೇ ಅತ್ಯಂತ ಹೆಚ್ಚು ಲಸಿಕೆ ನೀಡಿದ ದಿನವಾಗಿತ್ತು. ಆದರೆ, ಇಂದು ಮಧ್ಯಾಹ್ನದವರೆಗೂ 1 ಕೋಟಿ ಲಸಿಕೆ ನೀಡಲಾಗಿದ್ದು, ದಿನದ ಅಂತ್ಯಕ್ಕೆ 2 ಕೋಟಿ ಡೋಸ್ ಗೂ ಅಧಿಕ ಲಸಿಕೆ ನೀಡುವ ನಿರೀಕ್ಷೆ ಹೊಂದಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ 20 ದಿನಗಳ ಮೆಗಾ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದು ಅಕ್ಟೋಬರ್ 7ರವರೆಗೆ ಮುಂದುವರೆಯಲಿದೆ. ಸೇವಾ ಮತ್ತು ಸಮರ್ಪಣಾ ಅಭಿಯಾನವಾಗಿ ಮೋದಿ ಜನ್ಮ ದಿನದಂದು ದೇಶಾದ್ಯಂತ ಕೋವಿಡ್-19 ಲಸಿಕಾ ಅಭಿಯಾನ ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದೆ.

ಕೋವಿಡ್ ಔಷಧಿಗಳ ಮೇಲಿನ ತೆರಿಗೆ ರಿಯಾಯಿತಿಯನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಹಿಂದಿನ ಜಿಎಸ್‌ಟಿ ಸಭೆಯಲ್ಲಿ, ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಲಾಗಿತ್ತು.

Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ

ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.

ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿತ್ತು. ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿತ್ತು.

45ನೇ ಜಿಎಸ್‌ಟಿ ಮಂಡಳಿಯ ಸಭೆ ಇಂದು ಲಕ್ನೋದಲ್ಲಿ ನಡೆಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ರಾಜ್ಯಗಳ ವಿತ್ತ ಸಚಿವರು ಪಾಲ್ಗೊಂಡಿದ್ದರು.

ಕೊರೊನಾ ಸೋಂಕು ಆರಂಭವಾದ ಬಳಿಕ ಮೊದಲ ಬಾರಿಗೆ ವರ್ಚ್ಯುವಲ್ ಸಭೆ ಬಿಟ್ಟು ನೇರವಾಗಿ ಸಭೆ ಸೇರಿದ್ದಾರೆ. ರಿಯಾಯಿತಿ ದರದಲ್ಲಿ ಹೆಚ್ಚಿನ ಔಷಧಿಗಳನ್ನು ನೀಡಲು ಅನುಮತಿ ನೀಡಲಾಗಿದೆ, ಜಿಎಸ್‌ಟಿ ದರವನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಲಾಗಿದೆ.

ಇವುಗಳಲ್ಲಿ ಇಟೊಲಿಜುಮಾಬ್, ಪೊಸಕೊನಾಜೋಲ್, ಇನ್‌ಫ್ಲಿಕ್ಸಿಮಾಬ್, ಬಮ್ಲನಿವಿಮಾಬ್, ಎಟೀಸ್ವಿಮಾಬ್ ಹಾಗೂ ಇಮ್‌ಡೆವಿಮಾಬ್ , ಫೆರಿಫಿರಾವಿರ್, 2 ಡಿಯೋಕ್ಸಿ- ಡಿ-ಗ್ಲೂಕೋಸ್ ಕೂಡ ಸೇರಿದೆ.

English summary
As the government raced to deliver a vaccination record on Prime Minister Narendra Modi's birthday today, the country clocked over 42,000 vaccinations a minute, a senior health official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X