ಪಾಸ್ಪೋರ್ಟ್ ಸೇವಾ ಆ್ಯಪ್ ಸೂಪರ್ ಹಿಟ್, 2 ದಿನದಲ್ಲಿ 10 ಲಕ್ಷ ಡೌನ್ಲೋಡ್
ನವದೆಹಲಿ, ಜೂನ್ 29: ಎರಡೇ ಎರಡು ದಿನದಲ್ಲಿ ಕೇಂದ್ರ ಸರಕಾರದ ಪಾಸ್ಪೋರ್ಟ್ ಸೇವಾ ಮೊಬೈಲ್ ಆ್ಯಪ್ ಭಾರೀ ಜನಪ್ರಿಯತೆ ಪಡೆದುಕೊಂಡಿದೆ. ಈ ಅವಧಿಯಲ್ಲಿ ಬರೋಬ್ಬರಿ 10 ಲಕ್ಷ ಆ್ಯಪ್ ಗಳು ಡೌನ್ಲೋಡ್ ಆಗಿವೆ. ಶುಕ್ರವಾರ ಈ ಸುದ್ದಿಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ನಲ್ಲಿ ಖಚಿತಪಡಿಸಿದ್ದಾರೆ.
ಬುಧವಾರದಂದು ಆರನೇ ಪಾಸ್ಪೋರ್ಟ್ ಸೇವಾ ದಿವಸದ ಸಂದರ್ಭದಲ್ಲಿ ಈ ಮೊಬೈಲ್ ಆ್ಯಪ್ ಗೆ ಚಾಲನೆ ನೀಡಲಾಗಿತ್ತು.
"ಇತ್ತೀಚೆಗೆ ವಿದೇಶಾಂಗ ಸಚಿವಾಲಯ ಪಾಸ್ಪೋರ್ಟ್ ಸೇವಾ ಮೊಬೈಲ್ ಆ್ಯಪ್ ನ್ನು ಬಿಡುಗಡೆ ಮಾಡಿತ್ತು. ಈಗಾಗಲೇ ಇದು10 ಲಕ್ಷ ಡೌನ್ಲೋಡ್ ಆಗಿದೆ," ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ. ಅವರು ಈ ಆ್ಯಪ್ ಬಿಡುಗಡೆಗೂ ಮುನ್ನವೇ ಇದೊಂದು ಕ್ರಾಂತಿಕಾರಿ ನಡೆ ಎಂದು ಬಣ್ಣಿಸಿದ್ದರು. ಐಒಎಸ್ ಮತ್ತು ಆ್ಯಂಡ್ರಾಯ್ಡ್ ಗೆ ಈ ಆ್ಯಪ್ ಲಭ್ಯವಿದೆ.
Passport Seva mobile App launched recently by the Ministry of External Affairs recently has already registered 1 million downloads. https://t.co/P2sQEGWETp
— Sushma Swaraj (@SushmaSwaraj) June 29, 2018
ಈ ಆ್ಯಪ್ ಮೂಲಕ ಬಳಕೆದಾರರು ಪಾಸ್ಪೋರ್ಟ್ ಗೆ ಅರ್ಜಿ ಸಲ್ಲಿಸಿ, ಹಣ ಕಟ್ಟಿ ಭೇಟಿಗೆ ಸಮಯ ನಿಗದಿಪಡಿಸಿಕೊಳ್ಳಬಹುದಾಗಿದೆ. ಸುಲಭ ಪಾಸ್ಪೋರ್ಟ್ ಪಡೆಯುವಂತೆ ಮಾಡುವ ವಿದೇಶಾಂಗ ಇಲಾಖೆಯ ಉದ್ದೇಶಕ್ಕೆ ಬೆಂಬಲವಾಗಿ ಈ ಆ್ಯಪ್ ಬಿಡುಗಡೆ ಮಾಡಲಾಗಿದೆ.

ನೀವು ಎಲ್ಲೇ ನೆಲೆಸಿದ್ದರೂ ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವಾಗ ಪ್ರಾದೇಶಿಕ ಪಾಸ್ಪೋರ್ಟ್ ಕೇಂದ್ರ, ಪಾಸ್ಪೋರ್ಟ್ ಸೇವಾ ಕೇಂದ್ರ ಅಥವಾ ಪೋಸ್ಟ್ ಆಫೀಸ್ ಪಾಸ್ಪೋರ್ಟ್ ಸೇವಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications