Good News: ₹10,000 ಮಹಿಳೆಯರ ಖಾತೆಗೆ ಪ್ರಧಾನಿ ನರೇಂದ್ರ ಮೋದಿ ಗುಡ್‌ನ್ಯೂಸ್, ಯಾರಿಗೆ ಅನ್ವಯ ?

Good News: ದೇಶದ ಜನರಿಗೆ ಅದರಲ್ಲೂ ಈ ರಾಜ್ಯದ ಮಹಿಳೆಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕೇಂದ್ರ ಸರ್ಕಾರವು ಈಚೆಗೆ ಜಿಎಸ್‌ಟಿಗೆ ಸಂಬಂಧಿಸಿದಂತೆ ಗುಡ್‌ನ್ಯೂಸ್ ಕೊಟ್ಟಿತ್ತು. ಇದೀಗ ಮಹಿಳೆಯರಿಗೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಈ ಮೂಲಕ ಪ್ರತಿ ಮಹಿಳೆಯರ ಖಾತೆಗೆ 10,000 ಸಾವಿರ ರೂಪಾಯಿ ಸಿಗಲಿದೆ. ಆದರೆ ಇದು ದೇಶದ ಎಲ್ಲಾ ಮಹಿಳೆಯರಿಗೂ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಜಿಎಸ್‌ಟಿ ವಿಚಾರದಲ್ಲಿ ದೇಶದಾದ್ಯಂತ ಜನರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿತ್ತು. ಇದೀಗ ಬಿಹಾರ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಮತ್ತೊಂದು ಮಹತ್ವದ ಗುಡ್‌ನ್ಯೂಸ್ ಕೊಡಲಾಗಿದೆ. ಆದರೆ ಇದು ಕರ್ನಾಟಕವೂ ಸೇರಿದಂತೆ ಇನ್ನುಳಿದ ರಾಜ್ಯದ ಜನರ ಆಕ್ರೋಶಕ್ಕೂ ಕಾರಣವಾಗಿದೆ.

10 000 for Women s Accounts Good News PM Modi Reveals Who Can Benefit

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಮಹಿಳಾ ಉದ್ಯೋಗ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಬಿಹಾರ ಸರ್ಕಾರ ಹೇಳಿದೆ. ಈ ಯೋಜನೆಯಡಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 10,000 ರೂಪಾಯಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೆ ಸಂದರ್ಭದಲ್ಲೇ ಭಾರೀ ಮೊತ್ತವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಕಳೆದ ಮೂರು ವರ್ಷದ ಅವಧಿಯಲ್ಲಿ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಪಕ್ಷಗಳು ಗ್ಯಾರಂಟಿ ಯೋಜನೆ ಪರಿಚಯಿಸುತ್ತಿದ್ದರೆ, ಬಿಜೆಪಿ ಸಹ ಜನರಿಗೆ ಕೆಲವೊಂದು ಉಚಿತ ಯೋಜನೆಗಳನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದೆ. ಇದೀಗ ಬಿಹಾರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ದೊಡ್ಡ ಸರ್ಕಸ್ ಪ್ರಾರಂಭಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಬಿಜೆಪಿಯೇ ಇದೀಗ ಗ್ಯಾರಂಟಿ ಮಾದರಿಯ ಯೋಜನೆಗಳನ್ನು ಪರಿಚಯಿಸುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಮಹಿಳೆಯರನ್ನು ಸಬಲೀಕರಣಗೊಳಿಸಲು, ರಾಜ್ಯದಿಂದ ವಲಸೆ ಹೋಗುವುದನ್ನು ತಪ್ಪಿಸುವುದು ಮತ್ತು ಬಿಹಾರವನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಿರುವುದಾಗಿ ಬಿಹಾರ ಸರ್ಕಾರ ಹೇಳಿದೆ. ಇನ್ನು ಯೋಜನ ಪಡೆಯಲು ಸುಮಾರು ಒಂದು ಕೋಟಿ 10 ಲಕ್ಷ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ. ಯೋಜನೆಯ ಪ್ರಾರಂಭದ ಮೊದಲ ದಿನ 10,000 ರೂಪಾಯಿಗಳ ಮೊದಲ ಕಂತನ್ನು 75 ಲಕ್ಷ ಮಹಿಳೆಯರ ಖಾತೆಗಳಿಗೆ ವರ್ಗಾಯಿ ಸಲಾಗುವುದು. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮಹಿಳೆಯರ ಕಲ್ಯಾಣ ಕ್ರಮಗಳ ಭಾಗವಾಗಿ ಈ ಯೋಜನೆ ಇದೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲೂ ವಿರೋಧ: ಇನ್ನು ಈ ಯೋಜನೆಯನ್ನು ಬಿಹಾರದಲ್ಲಿ ಅನುಷ್ಠಾನ ಮಾಡಿರುವುದಕ್ಕೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ದೇಶದ ವಿವಿಧ ರಾಜ್ಯಗಳಿಂದ ಸಂಗ್ರಹವಾದ ತೆರಿಗೆ ಹಣವನ್ನು ಬಿಹಾರಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ವಿರೋಧ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+