India Corona Report: ಒಂದೇ ದಿನದಲ್ಲಿ 10,753 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಬೆಂಗಳೂರು, ಏಪ್ರಿಲ್‌ 15: ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹರಡುತ್ತಿದ್ದು, ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 10,753 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದಿನನಿತ್ಯದ ಪಾಸಿಟಿವ್ ದರ 6.78% ತಲುಪಿದೆ. ಒಂದು ವಾರದ ಪಾಸಿಟಿವ್ ದರ 4.49% ತಲುಪಿದೆ.

ಈ ನೂತನ ಪಾಸಿಟಿವ್ ಪ್ರಕರಣಗಳಿಂದಾಗಿ ದೇಶದಲ್ಲಿನ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 6,628 ಜನ ಕೊರೊನಾ ಸೋಂಕಿತರು ಗುಣ ಮುಖರಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 4,42,23,221 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

10,753 New Cases Of Covid 19 Recorded In India

ಇನ್ನು ಕಳೆದ 24 ಗಂಟೆಗಳಲ್ಲಿ 1,58,625 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 10,753 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಈವರೆಗೆ ದೇಶದಲ್ಲಿ 92.38ಕ್ಕೂ ಹೆಚ್ಚು ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಕರ್ನಾಟಕ ಕೋವಿಡ್‌ ಪ್ರಕರಣಗಳ ವಿವರ

ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 418 ಹೊಸ ಕೋವಿಡ್ ಪ್ರಕರಣಗಳೂ ಪತ್ತೆಯಾಗಿವೆ. ಈ ನೂತನ ಪಾಸಿಟಿವ್‌ ಪ್ರಕರಣಗಳ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1772ಕ್ಕೆ ಏರಿಕೆ ಆಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,81,445 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಮೃತಪಟ್ಟ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ಈವರೆಗೆ ಒಟ್ಟು 40,291 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

10,753 New Cases Of Covid 19 Recorded In India

ಇನ್ನು ರಾಜ್ಯದದಲ್ಲಿ ಒಂದೇ ದಿನ 360 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 40,81,445 ಕೊರೊನಾ ಪ್ರಕರಣಗಳಲ್ಲಿ 40,39,350 ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.t

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+