Holiday: ಶಾಲೆಗಳಿಗೆ 10 ದಿನ ರಜೆ ಘೋಷಣೆ
Holiday: ಈ ವರ್ಷದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಹಲವೆಡೆ ಶಾಲೆಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ ಜುಲೈ 1ರಿಂದ 10ರ ವರೆಗೂ ರಜೆಗಳನ್ನು ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆ ರಜೆ ಮುಗಿದು ಶಾಲೆಗಳು ಸಹ ಆರಂಭವಾಗಿವೆ. ಇದಕ್ಕೂ ಮುಂಚೆ ರಾಜ್ಯಗಳಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳ ವೇಳೆ ಸಾಲು ರಜೆಗಳನ್ನೇ ನೀಡಲಾಗಿದೆ. ಮತ್ತೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಿನ್ನೆಲೆ ಕೆಲವು ಜಿಲ್ಲೆಗಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆಗಳನ್ನು ಸಹ ಘೋಷಣೆ ಮಾಡಲಾಗಿದೆ.

ಇನ್ನೂ ಕೆಲವು ರಾಜ್ಯಗಳಲ್ಲಿ ರಣ ಬಿಸಿಲು ಮುಂದುವರೆದ ಕಾರಣ ಬೇಸಿಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಏರಿಕೆ ಆಗುತ್ತಲ್ಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 10 ದಿನಗಳ ಕಾಲ ಬೇಸಿಗೆ ರಜೆ ಘೋಷಿಸಲಾಗಿದೆ.
ಕಾಶ್ಮೀರ ವಿಭಾಗದ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಜುಲೈ 1ರಿಂದ 10ರ ವರೆಗೆ ಹತ್ತು ದಿನಗಳ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಶ್ರೀನಗರದಲ್ಲಿ ಸತತ ನಾಲ್ಕು ದಿನಗಳಿಂದ ದಾಖಲೆ ಮಟ್ಟದಲ್ಲಿ ತಾಪಮಾನ ದಾಲಾಗುತ್ತಿದ್ದು, ಇದರಿಂದ ಇಲ್ಲಿನ ತತ್ತರಿಸಿ ಹೋಗಿದ್ದಾರೆ. ಗುರುವಾರ ಮತ್ತು ಶುಕ್ರವಾರ ತಾಪಮಾನವು 36 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿತ್ತು. ಈ ಋತುವಿನಲ್ಲಿ ಇದುವರೆಗೆ ದಾಖಲಾದ ಅತ್ಯಧಿಕ ತಾಪಮಾನ ಇದಾಗಿದೆ ಎಂದು ತಿಳಿದುಬಂದಿದೆ.
ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಜಮ್ಮು ಶಿಕ್ಷಣ ಸಚಿವೆ ಸಕಿನಾ ಇಟೂ ಅವರು ಶ್ರೀನಗರ ಪುರಸಭೆಯ ವ್ಯಾಪ್ತಿಯಲ್ಲಿನ ಮತ್ತು ಕಾಶ್ಮೀರ ಕಣಿವೆಯಾದ್ಯಂತ ಶಾಲಾ ಸಮಯಗಳಲ್ಲಿ ಬದಲಾವಣೆ ಮಾಡಿದ್ದಾರೆ. ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಅದೇ ರೀತಿ, ಪುರಸಭೆಯ ವ್ಯಾಪ್ತಿಯಲ್ಲಿನ ಶಾಲೆಗಳಲ್ಲಿ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ತರಗತಿಗಳು ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಬಿರು ಬಿಸಿಲು ಮುಂದುವರೆದ ಕಾರಣ 10 ದಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ರಜೆಗಳು ವಿದ್ಯಾರ್ಥಿಗಳಿಗೆ ಹಬ್ಬವಾದರೆ, ಮತ್ತೊಂದೆಡೆ ನೋಡೋದಾದ್ರೆ ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗಲಿದೆ. ಆದ್ದರಿಂದ ರಜೆ ಬದಲಿಗೆ ಆನ್‌ಲೈನ್ ತರಗತಿಗಳನ್ನು ನಡೆಸಿದರೆ ಸೂಕ್ತ ಎಂದು ವಿದ್ಯಾರ್ಥಿಗಳ ಪೋಷಕರು ಹೇಳುತ್ತಿದ್ದಾರೆ.
ಈಗಾಗಲೇ ಉತ್ತರ ಭಾರದ ಹಲವು ರಾಜ್ಯಗಳಲ್ಲಿ ಬೇಸಿಗೆ ಸಮಯದಲ್ಲಿ ತಾಪಮಾನ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ತಿಂಗಳುಗಟ್ಟಲೇ ರಜೆ ನೀಡಿ ಮನೆಯಿಂದಲೇ ತರಗತಿಗಳನ್ನು ನಡೆಸುವಂತೆ ಅಲ್ಲಿನ ಶಿಕ್ಷಣ ಇಲಾಖೆಗಳು ಸೂಚನೆ ನೀಡಿದ್ದವು. ಆದರೆ ಇದೀಗ ಮಳೆಗಾಲದಲ್ಲೂ ಸಹ ಹಲವೆಡೆ ರಣಬಿಸಲು ಮುಂದುವರೆದು ಅಚ್ಚರಿ ಮೂಡಿಸಿದೆ.












Click it and Unblock the Notifications