ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Kullu Bus Accident: ಹಿಮಾಚಲ ಪ್ರದೇಶದಲ್ಲಿ ಬಸ್ ಉರುಳಿ 10 ಮಂದಿ ಸಾವು

|
Google Oneindia Kannada News

ಡೆಹ್ರಾಡೂನ್, ಜುಲೈ 4: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ನಿಯೋಲಿ-ಶಂಶೇರ್ ರಸ್ತೆಯ ಸೈನ್ಜ್ ಕಣಿವೆಯ ಜಂಗ್ಲಾ ಪ್ರದೇಶದಲ್ಲಿ ಖಾಸಗಿ ಬಸ್ ಬಂಡೆಯಿಂದ ಉರುಳಿ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕುಲು ಜಿಲ್ಲಾಧಿಕಾರಿ ಆಶುತೋಷ್ ಗರ್ಗ್ ತಿಳಿಸಿದ್ದಾರೆ.

ರೋಪ್ ವೇ ಮಧ್ಯೆ ಸಿಲುಕಿದ್ದ ಕೇಬಲ್ ಕಾರ್‌ನಿಂದ 11 ಪ್ರಯಾಣಿಕರ ರಕ್ಷಣೆ: ವಿಡಿಯೋ ನೋಡಿರೋಪ್ ವೇ ಮಧ್ಯೆ ಸಿಲುಕಿದ್ದ ಕೇಬಲ್ ಕಾರ್‌ನಿಂದ 11 ಪ್ರಯಾಣಿಕರ ರಕ್ಷಣೆ: ವಿಡಿಯೋ ನೋಡಿ

ಹಿಮಾಚಲ ಪ್ರದೇಶದ ಸೈಂಜ್ ಕಣಿವೆಯ ನಿಯೋಲಿ-ಶಂಶೇರ್ ರಸ್ತೆಯಲ್ಲಿ ಶಾಲಾ ಬಸ್ ಕುಲು-ಸೈಂಜ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಆಯತಪ್ಪಿ ಬಂಡೆಯಿಂದ ಉರುಳಿ ಬಿದ್ದಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ಸೈಂಜ್ ಕಣಿವೆಯ ನಿಯೋಲಿ-ಶಂಶೇರ್ ರಸ್ತೆಯಲ್ಲಿ ಸೋಮವಾರ ನಡೆದಿರುವ ಬಸ್ ಅಪಘಾತದ ಸಂದರ್ಭದಲ್ಲಿ ಮಕ್ಕಳು ಸಹ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಶುತೋಷ್ ಗರ್ಗ್ ಮಾಹಿತಿ ನೀಡಿದ್ದಾರೆ.

ಸಿಎಂ ಜೈರಾಮ್ ಠಾಕೂರ್ ಸಂತಾಪ

ಸಿಎಂ ಜೈರಾಮ್ ಠಾಕೂರ್ ಸಂತಾಪ

ಕುಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ ಅಪಘಾತದ ಬಗ್ಗೆ ನನಗೆ ಸುದ್ದಿ ಬಂದಿದೆ. ಇಡೀ ಆಡಳಿತ ಸ್ಥಳದಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಮೃತರ ಆತ್ಮಕ್ಕೆ ಶಾಂತಿ ಮತ್ತು ದುಃಖತಪ್ತ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ," ಎಂದು ಹಿಮಾಚಲ ಸಿಎಂ ಜೈರಾಮ್ ಠಾಕೂರ್ ಹೇಳಿದ್ದಾರೆ.

ಅಪಘಾತದ ಬಗ್ಗೆ ಪ್ರಧಾನಿ, ರಾಷ್ಟ್ರಪತಿ ಸಂತಾಪ

ಅಪಘಾತದ ಬಗ್ಗೆ ಪ್ರಧಾನಿ, ರಾಷ್ಟ್ರಪತಿ ಸಂತಾಪ

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ ಮೃತ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡಲಾಗತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅನುಮೋದಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

Recommended Video

Karnataka Rain ಮುಂದಿನ ಕೆಲವು ದಿನಗಳು Orange alert | *Karnataka | OneIndia Kannada

English summary
Himachal Pradesh: 10 dead after a private bus rolled off a cliff in Jangla area of Sainj valley on Neoli-Shansher road of Kullu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X