ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ 16 ವರ್ಷದ ಯುವಕನೊಂದಿಗೆ 10 ವರ್ಷದ ಬಾಲಕಿ ಪರಾರಿ
ಸಾಮಾನ್ಯವಾಗಿ ವಯಸ್ಸಿಗೆ ಬಂದ ಹಲವು ಯುವಕ, ಯುವತಿಯರು ಪ್ರೀತಿಸಿ ವಿವಾಹವಾಗಿರುವುದನ್ನು ನಾವು ಕೇಳೇ ಇರುತ್ತವೆ. ಆದರೆ ಇದೀಗ ವಿಚಿತ್ರ ಎಂಬಂತೆ 10 ವರ್ಷದ ಬಾಲಕಿಯೊಬ್ಬಳು ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ 16 ವರ್ಷ ಬಾಲಕನ ಜೊತೆ ಓಡಿಹೋದ ಘಟನೆ ನಡೆದಿದೆ. ಹಾಗಾದರೆ ಈ ಘಟನೆ ಬೆಳಕಿದೆ ಬಂದಿದ್ದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಪರಿಚಯವಾದ ಬಳಿಕ 10 ವರ್ಷದ ಬಾಲಕಿ 16 ವರ್ಷದ ಹುಡುಗನೊಂದಿಗೆ ಓಡಿಹೋದ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಈ ಘಟನೆ ನಡೆಯುತ್ತಿದ್ದಂತೆ ಬಾಲಕಿಯ ಮನೆಯವರು ದೂರು ನೀಡಿದ ಕೆಲವೇ ಗಂಟೆಗಳಲ್ಲೇ ಅವರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಳಿಕ ಇಬ್ಬರನ್ನೂ ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿಸೆಂಬರ್ 31ರಂದು 5ನೇ ತರಗತಿ ವಿದ್ಯಾರ್ಥಿನಿ ಈ 10 ವರ್ಷದ ಬಾಲಕಿಯು ಮನೆಯಿಂದ ನಾಪತ್ತೆಯಾಗಿದ್ದಳು. ಈ ವೇಳೆ ಪೋಷಕರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಎಲ್ಲೂ ವಿಚಾರಿಸಿದರೂ ಸಿಗದ ಕಾರಣ ಆಕೆಯ ಪೋಷಕರು ಕೊನೆಗೆ ಮನೆ ಮಗಳನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸರ ಬಳಿ ದೂರು ನೀಡಿದ್ದಾರೆ.
ತನಿಖೆಯ ವೇಳೆ ಅಪ್ರಾಪ್ತ ವಯಸ್ಕ ಬಾಲಕ, ಬಾಲಕಿ ಪರಸ್ಪರ ಸಾಮಾಜಿಕ ಜಾಲತಾಣದ ಭಾಗವಾದ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಾರೆ. ಪೊಲೀಸರು ಅಲ್ಲಿನ ಸಂದೇಶಗಳನ್ನು ವೀಕ್ಷಿಸಿದ್ದು, ಅದರಲ್ಲಿ ಇಬ್ಬರು ಪ್ರೀತಿಸುತ್ತಿರುವ ವಿಚಾರ ಇದೆ ಎಂದು ಖಾತರಿಪಡಿಸಿಕೊಂಡಿದ್ದಾರೆ. ಅಲ್ಲದೆ, ಡಿಸೆಂಬರ್ 31ರಂದು ಓಡಿಹೋಗಲು ಪ್ಲಾನ್ ಮಾಡಿದ್ದಾರೆ. ಇವರಿಗೆ ಮೂವರು ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಶಾಕಿಂಗ್ ವಿಚಾರ ಏನೆಂದ್ರೆ, ಬಾಲಕಿಯ ತಂದೆಗೆ ಸಾಮಾಜಿಕ ಜಾಲತಾಣದ ಬಗ್ಗೆ ಅಷ್ಟಾಗಿ ಗೊತಿರಲಿಲ್ಲವಂತೆ. ಆದರೆ, ಬಾಲಕಿಯು ತನ್ನ ತಾಯಿಯ ಫೋನ್‌ನಿಂದ ಇನ್‌ಸ್ಟಾಗ್ರಾಮ್ ಬಳಕೆ ಮಾಡಿಕೊಂಡಿದ್ದಾಳೆ. ಈ ಮೂಲಕ ಬೇರೆ ಹಳ್ಳಿಯಲ್ಲಿ ವಾಸಿಸುತ್ತಿದ್ದ ಹುಡುಗನೊಂದಿಗೆ ಪರಿಚಯವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಇಬ್ಬರೂ ಆಗಾಗ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ದೂರು ದಾಖಲಾದ ನಂತರ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಮನೆಯವರಿಗೆ ಒಪ್ಪಿಸಿದ್ದಾರೆ. ಬಳಿಕ ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿತ್ತು. 15 ವರ್ಷದ ಬಾಲಕಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 27 ವರ್ಷದ ಯುವಕನೊಂದಿಗೆ ಓಡಿಹೋಗಿದ್ದಳು. ಬಳಿಕ ಮದುವೆ ಸಮಾರಂಭ ಏರ್ಪಡಿಸಬೇಕು ಅಂತಲೂ ತಮ್ಮ ಪೋಷಕರಿಗೆ ಬೆದರಿಕೆ ಹಾಕಿದ ಘಟನೆಯೂ ನಡೆದಿತ್ತು.












Click it and Unblock the Notifications