• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking News: ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಏನು ವಿಷಯ?

|
Google Oneindia Kannada News

ನವದೆಹಲಿ, ಅಕ್ಟೋಬರ್ 22: ಭಾರತವು ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಗುರುವಾರ ಹೊಸ ಮೈಲಿಗಲ್ಲು ಸೃಷ್ಟಿಸಿದ ಬೆನ್ನಲ್ಲೇ ಶುಕ್ರವಾರ ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ಕೊರೊನಾವೈರಸ್ ಲಸಿಕೆ ವಿತರಣೆಗೆ ಶ್ರಮಿಸಿದ ಆರೋಗ್ಯ ಕಾರ್ಯಕರ್ತರು, ಕೊವಿಡ್-19 ಯೋಧರು ಹಾಗೂ 100 ಕೋಟಿ ಲಸಿಕೆ ವಿತರಿಸಿದ ಭಾರತಕ್ಕೆ ಅಭಿನಂದಿಸಿದ ವಿಶ್ವದ ಇತರೆ ನಾಯಕರ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸುವ ಸಾಧ್ಯತೆಗಳಿವೆ.

100 ಕೋಟಿ ಡೋಸ್ ಲಸಿಕೆ ಸಾಧನೆ; ಯಾರು, ಏನು ಹೇಳಿದರು?100 ಕೋಟಿ ಡೋಸ್ ಲಸಿಕೆ ಸಾಧನೆ; ಯಾರು, ಏನು ಹೇಳಿದರು?

ನಾವು 130 ಕೋಟಿ ಭಾರತೀಯರ ಭಾರತೀಯ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಟ್ವೀಟ್ ಮಾಡಿದ್ದರು.

ದೇಶದಲ್ಲಿ ಉಂಟಾಗಿದ್ದ ಕೋವಿಡ್ 19 ಬಿಕ್ಕಟ್ಟು ಸಂದರ್ಭದಲ್ಲಿ ಪ್ರಧಾನಿ ಹಲವು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಈಗ ಲಸಿಕೆಯಲ್ಲಿ ಆದಂತಹ ಮೈಲಿಗಲ್ಲು ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದು ಪ್ರತಿಯೊಬ್ಬ ಭಾರತೀಯನ ಸಾಧನೆ ಎಂದ ಪ್ರಧಾನಿ ಮೋದಿ

"ಇಂದು ಭಾರತವು ಕೋವಿಡ್ 19 ವಿರುದ್ಧ 'ಸುರಕ್ಷಾ ಕವಚ' ಎಂದು 100 ಕೋಟಿ ಲಸಿಕೆಗಳನ್ನು ಹೊಂದಿದೆ. ಇದು ಪ್ರತಿಯೊಬ್ಬ ಭಾರತೀಯನ ಸಾಧನೆಯಾಗಿದೆ. ಲಸಿಕೆ ತಯಾರಕರು, ಆರೋಗ್ಯ ಕಾರ್ಯಕರ್ತರು ಮತ್ತು ಈ ಲಸಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು.

ಭಾರತಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಅಭಿನಂದನೆ:

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ನಾಗರಿಕರಿಗೆ ಸಮಾನ ಲಸಿಕೆ ವಿತರಿಸಿದ್ದಕ್ಕಾಗಿಗಿ ಪ್ರಧಾನಿ ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಿದ್ದರು. "ಪ್ರಧಾನಮಂತ್ರಿ ನರೇಂದ್ರಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಭಾರತದ ಜನರು, COVID19 ನಿಂದ ದುರ್ಬಲ ಜನಸಂಖ್ಯೆಯನ್ನು ರಕ್ಷಿಸಲು ಮತ್ತು ವ್ಯಾಕ್ಸಿನ್ ಇಕ್ವಿಟಿ ಗುರಿಗಳನ್ನು ಸಾಧಿಸಲು ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು" ಎಂದು ಅವರು ಟ್ವೀಟ್ ಮಾಡಿದ್ದರು.

9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ:

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ ಎರಡನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳು ಅತಿಹೆಚ್ಚು ಲಸಿಕೆ ವಿತರಿಸಿದ ದೇಶದ ಟಾಪ್-5 ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

ಎಷ್ಟು ದಿನದಲ್ಲಿ ಎಷ್ಟು ಡೋಸ್ ಲಸಿಕೆ ನೀಡಲಾಗಿದೆ?

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಕ್ರಿಯೆಯನ್ನು ಆರಂಭಿಸಿ 279 ದಿನಗಳು ಕಳೆದಿವೆ. ಈವರೆಗೂ 86 ದಿನ 10 ಸಾವಿರಕ್ಕಿಂತ ಕಡಿಮೆ ಡೋಸ್ ಲಸಿಕೆ ನೀಡಿದರೆ, 46 ದಿನ 10 ರಿಂದ 20 ಸಾವಿರ ಡೋಸ್ ಲಸಿಕೆ ನೀಡಲಾಗಿದೆ. ಅದೇ ರೀತಿ 28 ದಿನ 20 ರಿಂದ 30 ಡೋಸ್, 24 ದಿನಗಳವರೆಗೆ 30 ರಿಂದ 40 ಸಾವಿರ ಡೋಸ್, 19 ದಿನಗಳಲ್ಲಿ 40 ರಿಂದ 50 ಡೋಸ್ ಹಾಗೂ 19 ದಿನಗಳಲ್ಲಿ 50 ರಿಂದ 60 ಸಾವಿರ ಡೋಸ್ ಲಸಿಕೆ ನೀಡಲಾಗಿದೆ. ಅದೇ ರೀತಿ 13 ದಿನಗಳಲ್ಲಿ 60 ರಿಂದ 70 ಸಾವಿರ ಡೋಸ್, 11 ದಿನಗಳಲ್ಲಿ 70 ರಿಂದ 80 ಸಾವಿರ ಡೋಸ್ ಮತ್ತು 14 ದಿನ 80 ರಿಂದ 90 ಸಾವಿರ ಡೋಸ್ ಲಸಿಕೆ ವಿತರಿಸಿದರೆ, 19 ದಿನಗಳಲ್ಲಿ 90 ರಿಂದ 1 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಆ ಮೂಲಕ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ.

ನರೇಂದ್ರ ಮೋದಿ
Know all about
ನರೇಂದ್ರ ಮೋದಿ
English summary
100 crore covid vaccination in India: PM Modi will address the nation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X