Lok Sabha Election 2024: ಇಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಹಾಲಿ 100 ಬಿಜೆಪಿ ಸಂಸದರಿಗೆ ಸಿಗಲ್ಲ ಟಿಕೆಟ್‌?

ನವದೆಹಲಿ, ಮಾರ್ಚ್‌ 02: ಭಾರತೀಯ ಜನತಾ ಪಕ್ಷವು (ಬಿಜೆಪಿ) ಮುಂಬರುವ ಲೋಕಸಭಾ ಚುನಾವಣೆ 2024 ರ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರ ಪೈಕಿ ಕನಿಷ್ಠ 100 ಸಂಸದರಿಗೆ ಬಿಜೆಪಿ ಟಿಕೆಟ್‌ ನೀಡದೇ ಇರಲು ನಿರ್ಧರಿಸಿದೆ ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಚುನಾವಣಾ ಸಮಿತಿಯು ವ್ಯಕ್ತಿಗಳ ಆರಂಭಿಕ ಪಟ್ಟಿಯನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ದೆಹಲಿಯ ಪ್ರಧಾನ ಕಚೇರಿಯಲ್ಲಿ ಗುರುವಾರ ತಡರಾತ್ರಿ ಸಭೆ ಸೇರಿತು. ನಾಲ್ಕು ಗಂಟೆಗಳ ಕಾಲ ಸಭೆ ನಡೆದಿದ್ದು, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಮತ್ತು ಇತರರು ಚುನಾವಣಾ ಆಯೋಗವು (ಇಸಿ) ಚುನಾವಣಾ ವೇಳಾಪಟ್ಟಿಯನ್ನು ಬಹಿರಂಗಪಡಿಸುವ ಮೊದಲು 543 ಲೋಕಸಭಾ ಸ್ಥಾನಗಳ ಅಂಚಿನ ಬಗ್ಗೆ ಚರ್ಚಿಸಿದರು.

100 Sitting BJP MPs Likely To Lose Their Ticket

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ, ಗುಜರಾತ್‌ನ ಭೂಪೇಂದ್ರ ಪಟೇಲ್, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶದ ಮೋಹನ್ ಯಾದವ್ ಮತ್ತು ಗೋವಾದ ಪ್ರಮೋದ್ ಸಾವಂತ್ ಸಹ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ 5 ವರ್ಷದ ಅವಧಿಯಲ್ಲಿ ಸಾಧನೆ ಮಾಡದೇ ಇರುವ ಸಂಸದರಿಗೆ ಮತ್ತೆ ಟಿಕೆಟ್‌ ನೀಡದೇ ಇರುವ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ.

ಇನ್ನೂ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ತಾಂತ್ರಿಕ ವಿಧಾನ ಅಳವಡಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ತಳಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಲು ಪಕ್ಷವು ವಿಶಿಷ್ಟ ವಿಧಾನ ಅಳವಡಿಸಿಕೊಂಡಿದೆ. ನಮೋ ಆ್ಯಪ್ ಮೂಲಕ ಪ್ರಸ್ತುತ ಸಂಸದರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಮೊದಲ 100 ಮಂದಿ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಪ್ರಕಟವಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+