100 ವರ್ಷದ ವೃದ್ಧೆ ಮೇಲೆ 20ರ ಯುವಕನಿಂದ ಅತ್ಯಾಚಾರ

ಕೋಲ್ಕತ್ತಾ (ಪಶ್ಚಿಮ ಬಂಗಾಲ), ಅಕ್ಟೋಬರ್ 24: 100 ವರ್ಷದ ವೃದ್ಧೆ ಮೇಲೆ 20 ವರ್ಷದ ಯುವಕನೊಬ್ಬ ಕ್ರೂರವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಲದ ನಾದಿಯಾ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿಯಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೃದ್ಧ ಮಹಿಳೆಯ ಕುಟುಂಬ ಸದಸ್ಯರು ಅರ್ಘ ಬಿಶ್ವಾಸ್ ಅಲಿಯಾಸ್ ಅಭಿಜಿತ್ ನನ್ನು ಹಿಡಿದಿದ್ದಾರೆ. ಮಂಗಳವಾರದಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಚಕ್ದಾ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯು ಗಂಗಪ್ರಸಾದ್ ಪುರ್ ಪ್ರದೇಶದವನು. ಆತನನ್ನು ಬಂಧಿಸಿದ ನಂತರ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ.

100 year old woman allegedly raped by 20 year man in West Bengal

ಸದ್ಯಕ್ಕೆ ಆರೋಪಿಯ ವಿಚಾರಣೆ ನಡೆಯುತ್ತಿದೆ. ಮಹಿಳೆಯ ಆರೋಗ್ಯ ತಪಾಸಣೆ ಪೂರ್ಣಗೊಳಿಸಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕೆಲ ಸಮಯದ ಹಿಂದೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಸ್ವತಃ ಮೊಮ್ಮಗನೇ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿದ್ದ. ಆತನನ್ನು ಕುಟುಂಬದವರೇ ಪೊಲೀಸ್ ವಶಕ್ಕೆ ಒಪ್ಪಿಸಿದ್ದರು. ಇಂಥವರ ಮಾನಸಿಕ ಆರೋಗ್ಯದ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+