ಭಾರತದ ಎರಡನೇ - ಮೂರನೇ ಹಂತದ ನಗರಗಳ ಅಭಿವೃದ್ಧಿಗೆ 1000 ಕೋಟಿ ರೂ.: ನಿರ್ಮಲಾ ಸೀತಾರಾಮನ್
ನವದೆಹಲಿ: 2026ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕೆಲವೊಂದು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. ದೇಶದ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಹಾದಿಯನ್ನು ಸೃಷ್ಟಿಸುತ್ತಿದ್ದೇವೆ. ಅಲ್ಲದೇ ಇದನ್ನು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಪ್ರಾಥಮಿಕವಾಗಿ ರಚನಾತ್ಮಕ ಸುಧಾರಣೆಗಳನ್ನು ಅಳವಡಿಸಿಕೊಂಡಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಸರ್ಕಾರವು ತನ್ನ ಆರ್ಥಿಕ ಸುಧಾರಣಾ ಪಥವನ್ನು ಮುಂದುವರಿಸುವ ನಿಟ್ಟಿನಲ್ಲಿ ಗಮನಹರಿಸಿದೆ. ದೇಶದ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಉದ್ಯೋಗ ಸೃಷ್ಟಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಾಕಷ್ಟು ಪೂರಕವಾದ ವಾತಾವರಣವನ್ನು ಸೃಷ್ಟಿಸಿದ್ದೇವೆ ಎಂದು ಖಚಿತಪಡಿಸಿಕೊಳ್ಳುವ ಗುರಿಯನ್ನು ರೂಪಿಸಿಕೊಂಡಿರುವುದಾಗಿಯೂ ಅವರು ಹೇಳಿದ್ದಾರೆ.

ಎರಡು - ಮೂರನೇ ಹಂತದ ನಗರಗಳಿಗೆ ಭರಪೂರ
ಬಜೆಟ್‌ನಲ್ಲಿ ನಗರ ಆರ್ಥಿಕ ಪ್ರದೇಶಗಳು ಎಂಬ ಹೊಸ ಪರಿಕಲ್ಪನೆಯನ್ನು ಒಳಗೊಂಡಿದೆ. 5 ವರ್ಷಗಳಲ್ಲಿ 5,000 ಕೋಟಿ ರೂ. ಹಂಚಿಕೆಯೊಂದಿಗೆ, ಅಂದರೆ, ಪ್ರತಿ ನಗರಕ್ಕೆ ವರ್ಷಕ್ಕೆ 1000 ಕೋಟಿ ರೂ. ಅನುದಾನ ಸಿಗಲಿದೆ ಮುಖ್ಯವಾಗಿ ಎರಡನೇ ಹಾಗೂ ಮೂರನೇ ಹಂತದ ನಗರಗಳು ಅಭಿವೃದ್ಧಿ ಆಗಲಿವೆ. ಇದರಿಂದ ನಗರಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
21ನೇ ಶತಮಾನವು ಸಂಪೂರ್ಣವಾಗಿ ತಂತ್ರಜ್ಞಾನದ ಮೇಲೆ ಅವಲಂಬಿತವಾಗಿದೆ. ಹೀಗಾಗಿ, ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ. ಜನರ ಜೀವನ ಮಟ್ಟ ಸುಧಾರಿಸುವುದು, ಸಾಮಾನ್ಯ ಜನರಿಗೆ ಪ್ರಯೋಜನವಾಗುವಂತೆ, ರೈತರು ಹೆಚ್ಚಿನ ಉತ್ಪಾದಕತೆ ಪಡೆಯುವಂತೆ ನಾವು ತಂತ್ರಜ್ಞಾನ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿಕೊಂಡಿದ್ದೇವೆ ತಂತ್ರಜ್ಞಾನವು ಎಲ್ಲರನ್ನೂ ಒಳಗೊಂಡ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಗುರಿಯನ್ನು ಹೊಂದಿರಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಸೌಲಭ್ಯಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ದಿವ್ಯಾಂಗರಿಗೆ ಗೌರವಾನ್ವಿತ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ದಿವ್ಯಾಂಗ ಸಹಾರ ಯೋಜನೆಯನ್ನು ಪರಿಚಯಿಸಲಾಗಿದೆ. ಮಾನಸಿಕ ಆರೋಗ್ಯ ಕ್ಷೇತ್ರದ ವಿಚಾರದಲ್ಲಿ ಸಾಕಷ್ಟು ಗಮನ ನೀಡಲಾಗಿದೆ. ಈ ಬಾರಿ ಸಾರ್ವಜನಿಕ ವೆಚ್ಚಕ್ಕೆ 12.2 ಲಕ್ಷ ಕೋಟಿ ರೂ. ಮೊತ್ತವನ್ನು ನಾವು ಘೋಷಿಸಿದ್ದೇವೆ. ಇದು ಜಿಡಿಪಿಯ 4.4% ರಷ್ಟಿದೆ. ಕನಿಷ್ಠ ಕಳೆದ 10 ವರ್ಷಗಳ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಮೀಸಲಿರಿಸಿದ ಅನುದಾನಕ್ಕಿಂತಲೂ ಇದು ಅತ್ಯಧಿಕವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಏಳು ಹೈಸ್ಪೀಡ್ ರೈಲು
ಏಳು ಹೈಸ್ಪೀಡ್ ರೈಲು ಕಾರಿಡಾರ್‌ಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಪ್ರಮುಖ ನಗರಗಳ ನಡುವೆ ಈ ಯೋಜನೆ ಅನುಷ್ಠಾನವಾಗಲಿದೆ. ಎಲ್ಲಾ ಅಭಿವೃದ್ಧಿ ನಗರಗಳ ನಡುವಿನ ಆರ್ಥಿಕ ಸೇತುವೆಯಾಗಿ ಈ ಹೈಸ್ಪೀಡ್ ರೈಲು ಕಾರ್ಯ ನಿರ್ವಹಿಸಲಿದೆ ಎಂದಿದ್ದಾರೆ.
ಸೆಮಿಕಂಡಕ್ಟರ್ ಮಿಷನ್
ಸೆಮಿಕಂಡಕ್ಟರ್ ಮಿಷನ್ 2.0: ಈ ವಲಯಕ್ಕೆ 40 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ. 40,000 ಕೋಟಿ ರೂ.ಗಳ ಎಲೆಕ್ಟ್ರಾನಿಕ್ ಘಟಕಗಳ ಉತ್ಪಾದನಾ ಯೋಜನೆಯು ಎಲೆಕ್ಟ್ರಾನಿಕ್ಸ್ ಸ್ವಾವಲಂಬಿಯಾಗಲು ಪ್ರಮುಖ ಪ್ರೋತ್ಸಾಹವಾಗಿದೆ. ಭಾರತವು ತನ್ನ ವಸ್ತುಗಳೊಂದಿಗೆ ತನ್ನದೇ ಆದ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುವಂತೆ ಅಪರೂಪದ ಭೂಮಿಯ ಕಾರಿಡಾರ್‌ಗಳನ್ನು ಸ್ಥಾಪಿಸುವುದಾಗಿ ನಾವು ಘೋಷಿಸಿದ್ದೇವೆ. ಆದ್ದರಿಂದ ನಾವು ಈ ಖನಿಜಗಳನ್ನು ಗುರುತಿಸಿ ಅವುಗಳನ್ನು ಅನ್ವೇಷಿಸಲು ಮುಂದಾಗಿದ್ದೇವೆ. ಈ ಕಾರಿಡಾರ್ ಅಭಿವೃದ್ಧಿಯಿಂದ ಬಾಹ್ಯ ಮೂಲಗಳ ಮೇಲಿನ ನಮ್ಮ ಅವಲಂಬನೆ ಕಡಿಮೆಯಾಗುತ್ತದೆ. ಒಡಿಶಾ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಈ ಕಾರಿಡಾರ್ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.












Click it and Unblock the Notifications