ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆಯರಿಗೆ ನ್ಯಾಯ ಒದಗಿಸಲು 1000 ತ್ವರಿತ ನ್ಯಾಯಾಲಯ ಸ್ಥಾಪನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 01: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಹಿಂಸಾಚಾರ ಮತ್ತು ಅಪರಾಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ದೇಶಾದ್ಯಂತ 1,000 ಫಾಸ್ಟ್‍ಟ್ರ್ಯಾಕ್ ಕೋರ್ಟ್‌ಗಳನ್ನು (ತ್ವರಿತ ನ್ಯಾಯಾಲಯಗಳು) ಸ್ಥಾಪಿಸುವುದಾಗಿ ಸರ್ಕಾರದ ಪರವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಕಟಿಸಿದ್ದಾರೆ.

ನಿನ್ನೆ ಸಂಸತ್‌ನ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, 'ಇಂದಿನಿಂದ ಆರಂಭವಾಗಿರುವ ಸಂಸತ್ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್‍ನ ಸೆಂಟ್ರಲ್ ಹಾಲ್‍ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರ ಜವಾಬ್ದಾರಿ ಮತ್ತು ಆದ್ಯತೆಯಾಗಿದೆ' ಎಂದು ಹೇಳಿದರು.

ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಹಿಂಸಾಚಾರ ಮತ್ತು ಅಪರಾಧ ಕೃತ್ಯಗಳ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ 1,000 ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ, ಇದು ಅಗತ್ಯವೂ ಆಗಿದೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

1000 Fastrack Courts All Over India: President Kovind

ಪಾಕಿಸ್ತಾನದಲ್ಲಿ ಹಿಂದು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಹಿಂಸಾಚಾರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರ ವಿರುದ್ಧ ಜಾಗತಿಕ ಸಮುದಾಯ ಒಗ್ಗೂಡಬೇಕೆಂದು ಸಲಹೆ ಮಾಡಿದರು.

ಹಲವು ಅಭಿವೃದ್ಧಿ ವಿಷಯಗಳ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಅವರು ಸಿಎಎ ಪರವಾಗಿ ಮಾತನಾಡಿದರು. ಆದರೆ ತಮ್ಮ ಭಾಷಣದಲ್ಲಿ ಅವರು ಎನ್‌ಸಿಆರ್ ಅನ್ನು ಹೊರಗಿಟ್ಟರು.

English summary
President Ram Nath Kovind said 1000 fastrack courts will be started to give justice in cases against women.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X