ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್: ದೇಶದಲ್ಲಿ ಸತತ ಎರಡನೆಯ ದಿನ 100ಕ್ಕಿಂತ ಕಡಿಮೆ ಸಾವು

|
Google Oneindia Kannada News

ನವದೆಹಲಿ, ಫೆಬ್ರವರಿ 15: ದೇಶದಲ್ಲಿ ಸತತ ಎರಡನೆಯ ದಿನ ನೂರಕ್ಕಿಂತ ಕಡಿಮೆ ಕೋವಿಡ್ ಸಂಬಂಧಿ ಸಾವುಗಳು ವರದಿಯಾಗಿವೆ. ಆದರೆ ಸಕ್ರಿಯ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಇದಕ್ಕೆ ಕಾರಣವಾಗಿರುವುದು ಮಹಾರಾಷ್ಟ್ರದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,649 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಅರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಒಟ್ಟು 90 ಮಂದಿ ಸೋಂಕಿತರು ಮೃತಪಟ್ಟಿದ್ದರೆ, 9,489 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಿಹಿಸುದ್ದಿ: ಕರ್ನಾಟಕದಲ್ಲಿ 5863 ಕೊರೊನಾ ಸಕ್ರಿಯ ಪ್ರಕರಣಗಳಷ್ಟೇ ಬಾಕಿಸಿಹಿಸುದ್ದಿ: ಕರ್ನಾಟಕದಲ್ಲಿ 5863 ಕೊರೊನಾ ಸಕ್ರಿಯ ಪ್ರಕರಣಗಳಷ್ಟೇ ಬಾಕಿ

ಇದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳ ಸಂಖ್ಯೆ 1,55,732ಕ್ಕೆ ತಲುಪಿದೆ. ಇದುವರೆಗೂ ಒಟ್ಟು 1,06,21,220 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,39,637ಗೆ ತಲುಪಿದೆ.

 11,649 New Coronavirus Cases, 90 Deaths Reported In India

ಮಹಾರಾಷ್ಟ್ರದಲ್ಲಿ ಒಂದು ದಿನದಲ್ಲಿ 4,092 ಜನರಿಗೆ ಕೋವಿಡ್ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 40 ಮಂದಿ ಜೀವ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ 645 ಹೊಸ ಪ್ರಕರಣ ಹಾಗೂ 4 ಸಾವು ವರದಿಯಾಗಿದೆ. 39 ದಿನಗಳ ಬಳಿಕ ಮಹಾರಾಷ್ಟ್ರದಲ್ಲಿ 4 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ 80 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾ ಲಸಿಕೆ ಭಾರತದಲ್ಲಿ 80 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ದೇಶದಾದ್ಯಂತ ಭಾನುವಾರ ಸಂಜೆಯವರೆಗೆ ಒಟ್ಟು 82,85,295 ಜನರಿಗೆ ಲಸಿಕೆ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇಂದಿನಿಂದ ಎರಡನೆಯ ಡೋಸ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ.

English summary
India records 11,649 new Covid-19 cases, 90 deaths in 24 hours . Total active cases increased to 1,39,637.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X