ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 11 ಕಾರ್ಮಿಕರ ದಾರುಣ ಸಾವು
ಮಧ್ಯ ಪ್ರದೇಶ, ಫೆಬ್ರವರಿ 06: ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮಂಗಳವಾರ ಭೀಕರ ದುರಂತ ಸಂಭವಿಸಿದೆ. ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹನ್ನೊಂದು ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಸಂಪೂರ್ಣ ಕಾರ್ಖಾನೆ ಹೊತ್ತಿ ಉರಿದಿದ್ದು, ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಬೆಂಕಿ ಹೊತ್ತಲು ಕಾರಣ ಏನು ಎನ್ನುವುದು ಈವರೆಗೆ ತಿಳಿದು ಬಂದಿಲ್ಲ.

ಸದ್ಯ ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗಿದೆ. ಹಲವು ಮಂದಿ ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ 400 ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪಟಾಕಿ ಕಾರ್ಖಾನೆಯ ಬೆಂಕಿ ಕೆನ್ನಾಲಿಗೆ ಸುತ್ತಲಿನ ಪ್ರದೇಶಕ್ಕೂ ಹರಡುತ್ತಿದ್ದು, ದಟ್ಟ ಹೊಗೆ ಎಲ್ಲೆಡೆ ಆವರಿಸುತ್ತಿದೆ. ಇದರಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಸದ್ಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಕಿ ಆರಿಸಲು ಹರಸಾಹಸ ಪಡಲಾಗುತ್ತಿದೆ. ಘಟನಾ ಸ್ಥಳದಲ್ಲಿ 50ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿದ್ದು, ಪಟಾಕಿ ಕಾರ್ಖಾನೆ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂತಾಪ
ಮಧ್ಯ ಪ್ರದೇಶದಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇನ್ನು ಕೇಂದ್ರ ಸರ್ಕಾರದ ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications