Manipur: ಮಣಿಪುರದಲ್ಲಿ ಎನ್‌ಕೌಂಟರ್; ಕನಿಷ್ಠ 11 ಉಗ್ರರ ಹತ್ಯೆ
ಸೋಮವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಗುಂಡಿನ ಚಕಮಕಿ ನಡೆದಿದೆ. ಸಿಆರ್‌ಪಿಎಫ್ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು ಕನಿಷ್ಠ 11 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಎನ್‌ಕೌಂಟರ್‌ನಲ್ಲಿ ಒಬ್ಬ ಸಿಆರ್‌ಪಿಎಫ್ ಯೋಧ ಕೂಡ ಗಾಯಗೊಂಡಿದ್ದಾರೆ. ಅವರನ್ನು ವಿಮಾನದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯೊಂದಿಗೆ ಮಣಿಪುರದಲ್ಲಿ ಸಂಘರ್ಷ ಇನ್ನೂ ನಿಂತಿಲ್ಲ ಎನ್ನುವ ಸಂದೇಶ ರವಾನಿಸಲಾಗಿದೆ. 2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ.

ಮೈತೆಯಿ ಮತ್ತು ಬುಡಕಟ್ಟು ಜನಾಂಗವಾದ ಕುಕಿಗಳ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ ಈವರೆಗೂ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಅಂಗಡಿಗಳಿಗೆ ಬೆಂಕಿ
ಗುಂಡಿನ ದಾಳಿ ಒಂದು ಕಡೆಯಾದರೆ ಮತ್ತೊಂದು ಕಡೆ ಶಸ್ತ್ರಸಜ್ಜಿತ ಉಗ್ರರು ಜಿಲ್ಲೆಯ ಬೊರೊಬೆಕ್ರಾ ಉಪವಿಭಾಗದಲ್ಲಿರುವ ಹಲವಾರು ಅಂಗಡಿಗಳಿಗೆ ಬೆಂಕಿ ಹೆಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆಯತ್ತ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ. ಬಳಿಕ ಜಕುರಾದೋರ್ ಕರೋಂಗ್ ಕಡೆಗೆ ತೆರಳಿದ ಉಗ್ರರು ಬೆಂಕಿ ಹಚ್ಚಲು ಆರಂಭಿಸಿದರು.
ಅಂಗಡಿಗಳಿಗೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೆ ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೂ ಗುಂಡಿನ ದಾಳಿ ಮಾಡಿದ್ದಾರೆ. ಬೆಟ್ಟ ಮೇಲಿನಿಂದ ರೈತರ ಮೇಲೆ ಗುಂಡು ಹಾರಿಸಿದ್ದು ರೈತಬೊಬ್ಬ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇಂಫಾಲ ಕಣಿವೆಯಲ್ಲಿ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಇದು ಮೂರನೇ ಬಾರಿಗೆ ಗುಂಡಿನ ದಾಳಿ ನಡೆದಿದೆ. ಸತತ ಮೂರನೇ ದಿನ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಕೆಲ ಹೊತ್ತು ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ರೈತನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಶಸ್ತ್ರಾಸ್ತ್ರಗಳ ವಶ
ಮಳೆದ ಮೂರು ದಿನಗಳಿಂದ ಮಣಿಪುರದ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಐಇಡಿಗಳನ್ನು ವಶಪಡಿಸಿಕೊಂಡಿವೆ ಎಂದು ಅಸ್ಸಾಂ ರೈಫಲ್ಸ್ ಮಾಹಿತಿ ನೀಡಿದೆ.












Click it and Unblock the Notifications