ಭಾರತದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರೇ ಹೆಚ್ಚು
ನವದೆಹಲಿ, ಫೆಬ್ರವರಿ.03: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 11039 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ ಒಂದು ದಿನದಲ್ಲಿ ಕೊವಿಡ್-19 ಮಹಾಮಾರಿಗೆ 110 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,54,596ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಮಂಗಳವಾರ ಒಂದೇ ದಿನ 14,225 ಸೋಂಕಿತರು ಗುಣಮುಖರಾಗಿದ್ದಾರೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,07,77,284ಕ್ಕೆ ಏರಿಕೆಯಾಗಿದೆ. 1,04,62,631 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,60,057 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

7,21,121 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 7,21,121 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 19,84,73,178 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.












Click it and Unblock the Notifications