ಭಾರತದಲ್ಲಿ ಒಂದೇ ದಿನ 11067 ಮಂದಿಗೆ ಕೊರೊನಾ ಪಾಸಿಟಿವ್

ನವದೆಹಲಿ, ಫೆಬ್ರವರಿ.10: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 11 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 11067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 94 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,252ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 13,087 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,58,371ಕ್ಕೆ ಏರಿಕೆಯಾಗಿದೆ. 1,05,61,608 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,41,511 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

11067 New Covid-19 Cases And 94 Deaths Reported In India In The Last 24 Hours

7,36,903 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 7,36,903 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 20,33,24,655 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 66,11,561 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+