ಸಿಹಿಸುದ್ದಿ: ಕೊರೊನಾ ಲಸಿಕೆ ಹಾಕಿಸಿಕೊಂಡ ನಂತರ ಸಾವಿನ ಸಂಖ್ಯೆ ಇಳಿಮುಖ

ನವದೆಹಲಿ, ಜುಲೈ 20: ಭಾರತದಲ್ಲಿ 125 ದಿನಗಳ ನಂತರ ಮೊದಲ ಬಾರಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 30,000ಕ್ಕೆ ಇಳಿಮುಖವಾಗಿದೆ. 111 ದಿನಗಳ ನಂತರ ಸಾವಿನ ಸಂಖ್ಯೆ 400ಕ್ಕಿಂತ ಕಡಿಮೆಯಾಗಿದೆ. ಕಳೆದ ಮಾರ್ಚ್ ಮಾರ್ಚ್ 30ರ ನಂತರ ಮೊದಲ ಬಾರಿಗೆ ಒಂದು ದಿನದಲ್ಲಿ ಮೃತಪಟ್ಟವರ ಸಂಖ್ಯೆ 374ಕ್ಕೆ ಇಳಿಮುಖವಾಗಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ಪಡೆದ ನಂತರದಲ್ಲಿ ಹೊಸ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿರುವ ಬಗ್ಗೆ ಸ್ವತಃ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಪರಿಣಾಮ ಹೇಗಿರುತ್ತದೆ. ದೇಶದಲ್ಲಿ ಕೊವಿಡ್-19 ನಿಯಂತ್ರಣದ ಮೇಲೆ ಹಿಡಿತ ಸಾಧಿಸುವುದು ಸೇರಿದಂತೆ ಮುಂದಿನ 120 ದಿನಗಳಲ್ಲಿ ಭವಿಷ್ಯ ತೀರ್ಮಾನವಾಗಲಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಮಧ್ಯೆ ದೇಶದಲ್ಲಿ ಲಸಿಕೆ ವಿತರಣೆ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಸಾವಿನ ಸಂಖ್ಯೆ ಇಳಿಮುಖವಾಗುತ್ತಿರುವುದು ಗೊತ್ತಾಗಿದೆ.

ಕೊವಿಡ್-19 ಸೋಂಕಿತ ಪ್ರಕರಣ, ಸಾವಿನ ಪ್ರಕರಣ

ಕೊವಿಡ್-19 ಸೋಂಕಿತ ಪ್ರಕರಣ, ಸಾವಿನ ಪ್ರಕರಣ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ30,093 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 374 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 45,254 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 3,11,74,322 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,03,53,710 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,14,482 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,06,130 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,92,336 ದೇಶದಲ್ಲಿ ಈವರೆಗೂ 44,73,41,133 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ

ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ದೇಶದಲ್ಲಿ ಈವರೆಗೂ 41.18 ಕೋಟಿ ಜನರಿಗೆ ಲಸಿಕೆ

ದೇಶದಲ್ಲಿ ಈವರೆಗೂ 41.18 ಕೋಟಿ ಜನರಿಗೆ ಲಸಿಕೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 185 ದಿನಗಳೇ ಕಳೆದಿವೆ. ಈವರೆಗೂ 41 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 47,77,697 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 41,18,46,401 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+