ಭಾರತದಲ್ಲಿ 24 ಗಂಟೆಗಳಲ್ಲಿ 11427 ಮಂದಿಗೆ ಕೊರೊನಾ ಪಾಸಿಟಿವ್

ನವದೆಹಲಿ, ಫೆಬ್ರವರಿ.01: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 11427 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 11858 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 118 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,07,57,610ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,54,392 ಮಂದಿ ಪ್ರಾಣ ಬಿಟ್ಟಿದ್ದಾರೆ. 1,04,34,983 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,68,235 ಸಕ್ರಿಯ ಪ್ರಕರಣಗಳಿವೆ.

 11427 New Covid-19 Cases And 118 Deaths Reported In India In The Last 24 Hours

5,04,263 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 5,04,263 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 19,70,92,635 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+