24 ಗಂಟೆ.. 84 ಮಂದಿ ಸಾವು: ಭಾರತದಲ್ಲಿ ಕೊರೊನಾ ಕಂಡೀಷನ್?

ನವದೆಹಲಿ, ಫೆಬ್ರವರಿ.08: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮತ್ತೆ 11 ಸಾವಿರದ ಗಡಿ ದಾಟಿದೆ. ಒಂದೇ ದಿನದಲ್ಲಿ 11831 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 84 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,080ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 11,904 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,38,194ಕ್ಕೆ ಏರಿಕೆಯಾಗಿದೆ. 1,05,34,505 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,48,609 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

11831 New Covid-19 Cases And 84 Deaths Reported In India In The Last 24 Hours

5,32,236 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 5,32,236 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 20,19,00,614 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 58,12,362 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+