ಭಾರತದಲ್ಲಿ ಮತ್ತೆ ಹೊಸದಾಗಿ 12,143 ಮಂದಿ ಕೊರೊನಾ ಸೋಂಕಿತರು ಪತ್ತೆ

ನವದೆಹಲಿ,ಫೆಬ್ರವರಿ 13: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,143 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್ 103 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 1,08,92,746ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

12,143 New Covid-19 Cases And 87 Deaths Reported In India In The Last 24 Hours

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 79,67,647 ರೊಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿ ಒಂದೇ ದಿನ 7,36,903 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,33,24,655 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಈ ನಡುವೆ ಒಟ್ಟಾರೆ 1,08,92,746 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,395 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,06,00,625ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,36,571 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+