India Corona Report: ಒಂದೇ ದಿನದಲ್ಲಿ 12,193 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಬೆಂಗಳೂರು, ಏಪ್ರಿಲ್ 22: ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹರಡುತ್ತಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 12,193 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದಿನನಿತ್ಯದ ಪಾಸಿಟಿವ್ ದರ 6.17% ತಲುಪಿದೆ. ಒಂದು ವಾರದ ಪಾಸಿಟಿವ್ ದರ 5.29% ತಲುಪಿದೆ.
ಈ ನೂತನ ಪಾಸಿಟಿವ್ ಪ್ರಕರಣಗಳಿಂದಾಗಿ ದೇಶದಲ್ಲಿನ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 67,556ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 10,765 ಜನ ಕೊರೊನಾ ಸೋಂಕಿತರು ಗುಣ ಮುಖರಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 4,42,83,021 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನು ಕಳೆದ 24 ಗಂಟೆಗಳಲ್ಲಿ 1,97,447 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 12,193 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಈವರೆಗೆ ದೇಶದಲ್ಲಿ 92.52ಕ್ಕೂ ಹೆಚ್ಚು ಕೋಟಿ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಕರ್ನಾಟಕ ಕೋವಿಡ್ ಪ್ರಕರಣಗಳ ವಿವರ
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 537 ಹೊಸ ಕೋವಿಡ್ ಪ್ರಕರಣಗಳೂ ಪತ್ತೆಯಾಗಿವೆ. ಈ ನೂತನ ಪಾಸಿಟಿವ್ ಪ್ರಕರಣಗಳ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2070ಕ್ಕೆ ಏರಿಕೆ ಆಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,84,008 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಯಾವುದೇ ಸಾವು ಸಂಭವಿಸಿದ್ದ. ಆದರೆ ಈವರೆಗೆ ಒಟ್ಟು 40,229 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಇನ್ನು ರಾಜ್ಯದದಲ್ಲಿ ಒಂದೇ ದಿನ 444 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 40,84,008 ಕೊರೊನಾ ಪ್ರಕರಣಗಳಲ್ಲಿ 40,40,677 ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.












Click it and Unblock the Notifications