ಜಾರ್ಖಂಡ್‌ನಲ್ಲಿ 12 ಮಾವೋವಾದಿಗಳ ಹತ್ಯೆ
ನವದೆಹಲಿ, ಜೂ. 09 : ಜಾರ್ಖಂಡ್‌ನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಪನಾಮು ಜಿಲ್ಲೆಯ ಸತ್ ಬರ್ವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಗುಂಡಿನ ಕಾಳಗ ನಡೆದಿದೆ. ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ನಕ್ಸಲರ ಮೇಳೆ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 12 ಮಾವೋವಾದಿಗಳು ಮೃತಪಟ್ಟಿದ್ದಾರೆ. [ಉಲ್ಫಾ ಉಗ್ರರಿಂದ 20 ಯೋಧರ ಭೀಕರ ಹತ್ಯೆ]

ಮಾವೋವಾದಿಗಳು ಶಸ್ತ್ರಾಸ್ತ್ರಗಳೊಂದಿಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೊರಟಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಗುಂಡಿನ ದಾಳಿಯ ನಂತರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. [ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಬೆಳಗಾವಿ ಯೋಧ]
ನಕ್ಸಲರನ್ನು ಸುತ್ತುವರೆದ ಪೊಲೀಸ್ ಪಡೆ ಶರಣಾಗುವಂತೆ ಅವರಿಗೆ ಸೂಚನೆ ನೀಡಿತ್ತು. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಅವರು ಗುಂಡಿನ ದಾಳಿ ನಡೆಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ ಎಂದು ಜಾರ್ಖಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ನಕ್ಸಲರ ಪ್ರಾಬಲ್ಯವಿದೆ : ಜಾರ್ಖಂಡ್‌ನಲ್ಲಿ ನಕ್ಸಲರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಪನಾಮು ಸಹ ಒಂದು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಕ್ಸಲರ ಟೆಂಟ್‌ಗಳಿವೆ. ಕೆಲವು ದಿನಗಳ ಹಿಂದೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ನಕ್ಸಲರು ಬೃಹತ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡಿದ್ದರು. [ಪಿಟಿಐ ಚಿತ್ರ]












Click it and Unblock the Notifications