ಉತ್ತರ ಪ್ರದೇಶದಲ್ಲಿ 12 ವರ್ಷದ ಮಗು ಮೇಲೆ ಸಾಮೂಹಿಕ ಅತ್ಯಾಚಾರ: ಬಾಲಕಿ ಸಾವು
ಲಕ್ನೋ, ಜೂನ್. 08: ಉತ್ತರ ಪ್ರದೇಶದ ಬಸ್ತಿಯಲ್ಲಿ 12 ವರ್ಷದ ಬಾಲಕಿ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಕ್ಕೊಳಗಾದ ನಂತರ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸೋಮವಾರ ಗೌರ್ ಪ್ರದೇಶದಲ್ಲಿ ಬಾಲಕಿ ತರಕಾರಿ ಖರೀದಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಮಗುವಿನ ಮೇಲೆ ಅತ್ಯಾಚಾರ ಮಾಡಿ ಆಕೆಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಮೋನು ಸಾಹ್ನಿ, ರಾಜನ್ ನಿಶಾದ್ ಮತ್ತು ಕುಂದನ್ ಸಿಂಗ್ ಎಂದು ಗುರುತಿಸಲಾಗಿದೆ. ತರಕಾರಿ ಖರೀದಿಸಲು ಬಂದಿದ್ದ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತರಕಾರಿ ಖರೀದಿಸಲು ಹೋಗಿದ್ದ ಬಾಲಕಿ ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದನ್ನು ಗಮನಿಸಿದ ಕುಟುಂಬ ಸದಸ್ಯರು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ, ಮೋನು ಸಾಹ್ನಿ ಬಾಲಕಿ ಕುಂದನ್ ಸಿಂಗ್ ಅವರ ಮನೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಎಂದು ಕುಟುಂಬದವರಿಗೆ ತಿಳಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಸಂಜೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಬ್ಬ ಆರೋಪಿ ಮೋನು ಸಾಹ್ನಿ ಬಾಲಕಿ ಜೊತೆಗೆ ಪರಿಚಯ ಬೆಳೆಸಿಕೊಂಡಿದ್ದನು. ಹೀಗಾಗಿ ಆಕೆ ತರಕಾರಿ ತೆರಲು ಹೋದಾಗ ತನ್ನೊಂದಿಗೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಯಾರು ಇಲ್ಲದ ಜಾಗದಲ್ಲಿ ಅವನೊಂದಿಗೆ ಇತರ ಇಬ್ಬರು ಆರೋಪಿಗಳು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಗೋಪಾಲ್ ಕೃಷ್ಣ ಚೌಧರಿ ಹೇಳಿದ್ದಾರೆ.

ಘಟನೆ ಸಂಬಂಧ ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪಿಟಿಐಗೆ ತಿಳಿಸಿದ್ದಾರೆ. ಈ ಸಂಬಂಧ ಮೂವರ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳನ್ನು ಬಿಜೆಪಿ ಸದಸ್ಯರು ರಕ್ಷಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
बस्ती में बलात्कारी के ख़िलाफ़ जनता चीत्कार कर रही है लेकिन अपनों को बचाने के लिए भाजपा सरकार बहरी बन रही है। भाजपा बलात्कारियों की आरामगाह बन गयी है। pic.twitter.com/1kKJw9qOOQ
— Akhilesh Yadav (@yadavakhilesh) June 6, 2023
ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಈ ವಿಷಯವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದಾರೆ. "ಜನರು ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಆದರೆ ಅವರ ಜನರನ್ನು ರಕ್ಷಿಸಿವ ಸಲುವಾಗಿ, ಬಿಜೆಪಿ ಸರ್ಕಾರ ಕಿವುಡಾಗಿದೆ. ಬಿಜೆಪಿಯು ಅತ್ಯಾಚಾರಿಗಳಿಗೆ 'ಅರಮಗಾ' (ವಿಶ್ರಾಂತಿ ಸ್ಥಳ) ಆಗಿದೆ" ಎಂದು ಕಿಡಿ ಕಾರಿರುವ ಅವರು ಜನರು ಘಟನೆಯ ವಿರುದ್ಧ ಪ್ರತಿಭಟಿಸುತ್ತಿರಿವ 18 ಸೆಕೆಂಡುಗಳ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.












Click it and Unblock the Notifications