ಭಾರತದಲ್ಲಿ 24 ಗಂಟೆಗಳಲ್ಲಿ 15853 ಸೋಂಕಿತರು ಗುಣಮುಖ
ನವದೆಹಲಿ, ಫೆಬ್ರವರಿ.05: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮತ್ತೆ 12 ಸಾವಿರದ ಗಡಿಗೆ ತಲುಪಿದೆ. ಒಂದೇ ದಿನದಲ್ಲಿ 12408 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 120 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,54,823ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 15,853 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,02,591ಕ್ಕೆ ಏರಿಕೆಯಾಗಿದೆ. 1,08,02,591 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,51,460 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

7,15,776 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 7,15,776 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 19,99,31,795 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 49,59,445 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.












Click it and Unblock the Notifications