ಗುಡ್ ನ್ಯೂಸ್: ಅಂತೂ-ಇಂತೂ ಭಾರತದಲ್ಲಿ ಕೊರೊನಾವೈರಸ್ ಕಾಟ ಇಳಿಮುಖ

ನವದೆಹಲಿ, ಜೂನ್ 01: ಭಾರತದಲ್ಲಿ 54 ದಿನಗಳ ನಂತರ ಮೊದಲ ಬಾರಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 4 ಲಕ್ಷದ ಗಡಿ ದಾಟಿದ ಕೊವಿಡ್-19 ಸೋಂಕಿತರ ಸಂಖ್ಯೆ 1.27ಕ್ಕೆ ಇಳಿಮುಖಗೊಂಡಿದೆ.

ದೇಶದಲ್ಲಿ ಒಂದೇ ದಿನ 1,27,510 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,55,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,795 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,81,75,044 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,59,47,629 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,31,895 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 18,95,520 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ವೇಗ!

ಭಾರತದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ವೇಗ!

ಭಾರತದಲ್ಲಿ ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಕೊರೊನಾವೈರಸ್ ಸೋಂಕು ಪತ್ತೆ ಪರೀಕ್ಷೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 19,25,374 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 34,67,92,257 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಎಷ್ಟು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ?

ಎಷ್ಟು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಇದುವರೆಗೂ 21,60,46,638 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

18 ರಿಂದ 44 ವಯೋಮಾನದವರಿಗೆ ಲಸಿಕೆ ವಿತರಣೆ

18 ರಿಂದ 44 ವಯೋಮಾನದವರಿಗೆ ಲಸಿಕೆ ವಿತರಣೆ

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 2,02,10,889 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 23,491 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 98,83,778 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,87,633 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,56,67,311 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,21,965 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

Recommended Video

    ಇಂಥವ್ರು NSUI( ವಿದ್ಯಾರ್ಥಿ ಕಾಂಗ್ರೆಸ್)ನ ನಾಯಕರಾಗಬೇಕು !! | Oneindia Kannada
    45 ವರ್ಷ ಮೇಲ್ಪಟ್ಟವರಲ್ಲಿ ಕೊರೊನಾವೈರಸ್ ಲಸಿಕೆ

    45 ವರ್ಷ ಮೇಲ್ಪಟ್ಟವರಲ್ಲಿ ಕೊರೊನಾವೈರಸ್ ಲಸಿಕೆ

    ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,64,02,012 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,07,15,693 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,88,31,736 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,87,74,039 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+