ಕಡಿಮೆಯಾಯ್ತಾ ಕೊರೊನಾ; 14 ರಾಜ್ಯಗಳಲ್ಲಿ ಸಾವಿನ ಸಂಖ್ಯೆ ಶೂನ್ಯ!

ನವದೆಹಲಿ, ಫೆಬ್ರವರಿ.03: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಸಾವಿನ ಮನೆ ಸೇರುತ್ತಿರುವವ ಸಂಖ್ಯೆ ಗಣನೀಯ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದ 14 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಕಳೆದೊಂದು ದಿನದಲ್ಲಿ 12899 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊರೊನಾವೈರಸ್ ಮಹಾಮಾರಿಗೆ 110 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಬುಧವಾರ ಒಂದೇ ದಿನ 17,824 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,07,90,183ಕ್ಕೆ ಏರಿಕೆಯಾಗಿದೆ. 1,04,80,455 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,55,025 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

12899 New Covid-19 Cases And 107 Deaths Reported In India In The Last 24 Hours

7,42,841 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 7,42,841ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 19,92,16,019 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 41,38,918 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+