ಭಾರತದಲ್ಲಿ 12,000 ಗಡಿ ದಾಟಿದ ಕೊರೊನಾ ಪಾಸಿಟಿವ್ ಕೇಸ್!

ನವದೆಹಲಿ, ಫೆಬ್ರವರಿ.10: ಭಾರತದಲ್ಲಿ 10,000ಕ್ಕಿಂತ ತಗ್ಗಿದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 12 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 12923 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 108 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,360ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 11,764 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,71,294ಕ್ಕೆ ಏರಿಕೆಯಾಗಿದೆ. 1,05,73,372 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,42,562 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

12923 New Covid-19 Cases And 108 Deaths Reported In India In The Last 24 Hours

70,17,114 ಜನರಿಗೆ ಕೊರೊನಾವೈರಸ್ ಲಸಿಕೆ:

ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಸಹ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 70,17,114 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+