• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉತ್ತರಾಖಂಡ: ವಾಹನ ಕಮರಿಗೆ ಉರುಳಿ 13 ಜನ ಸಾವು, 4 ಮಂದಿಗೆ ಗಾಯ

|
Google Oneindia Kannada News

ಡೆಹ್ರಾಡೂನ್‌, ಅಕ್ಟೋಬರ್ 31: ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಲ್ಲಿ ಭಾನುವಾರ ವಾಹನವೊಂದು ಕಂದರಕ್ಕೆ ಉರುಳಿದ ಪರಿಣಾಮ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಚಕ್ರತಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಸ್ಥಳೀಯ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಜೊತೆಗೆ ಘಟನಾ ಸ್ಥಳಕ್ಕೆ ಧಾವಿಸಿದರು.

ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಡೆಹ್ರಾಡೂನ್ ಜಿಲ್ಲೆಯ ಚಕ್ರತಾದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಜನರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಮಾಡಲು ಮತ್ತು ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ನೀಡುವಂತೆ ಅವರು ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.

ಇಂದು ಟ್ವೀಟ್ ಮಾಡಿರುವ ಧಾಮಿ, "ಚಕ್ರತಾ ಪ್ರದೇಶದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಸಂಭವಿಸಿದ ಹೃದಯ ವಿದ್ರಾವಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ನನ್ನ ಸಂತಾಪಗಳು, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ" ಎಂದು ಬರೆದಿದ್ದಾರೆ. ಇನ್ನು ಮುಖ್ಯಮಂತ್ರಿಗಳು "ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಮತ್ತು ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ" ಎಂದು ಹೇಳಿದರು.

ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

English summary
At least 13 people were killed and four others injured after a vehicle plunged into a gorge in Uttarakhand's capital Dehradun on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X