ನೆರೆ ಮನೆ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ
ಕಾನ್ಪುರ, ಏಪ್ರಿಲ್ 24: ಹದಿಮೂರು ವರ್ಷದ ಬಾಲಕಿ ಮೇಲೆ ಹದಿನಾರು ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿ ತೀವ್ರವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದ ದೆಹತ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯ ಪರಿಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆ ನೆರೆಹೊರೆಯವರಾಗಿದ್ದಾರೆ.
ಭಾನುವಾರ ಈ ಘಟನೆ ನಡೆದಿದ್ದು, ತನ್ನ ಸಹೋದರಿಯ ಎದುರಿನಲ್ಲಿಯೇ ಬಾಲಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ತಂದೆ ಮತ್ತು ತಾಯಿಯೊಂದಿಗೆ ಸೇರಿಕೊಂಡ ಬಾಲಕ, ಆಕೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಇದರಿಂದ ಆಕೆಗೆ ತೀವ್ರ ಗಾಯಗಳಾಗಿವೆ. ಯಾರಿಗೂ ವಿಷಯ ಹೇಳದಂತೆ ಬೆದರಿಕೆ ಒಡ್ಡಿದ್ದಾರೆ. ಆಕೆ ತನ್ನ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಾಲಕನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ತಂದೆ ಮತ್ತು ತಾಯಿಯನ್ನು ಬಂಧಿಸಲಾಗಿದೆ.












Click it and Unblock the Notifications