ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಸ್ಥಿರ: ಭಾರತದಲ್ಲಿ ಒಂದೇ ದಿನ 1,34,154 ಮಂದಿಗೆ ಸೋಂಕು

|
Google Oneindia Kannada News

ನವದೆಹಲಿ, ಜೂನ್ 03: ಭಾರತದಲ್ಲಿ ಒಂದು ಹಂತದವರೆಗೆ ಅಟ್ಟಹಾಸ ಮೆರೆದ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಸ್ಥಿರತೆ ಕಾಯ್ದುಕೊಂಡಿದೆ. ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ.

ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,887 ಮಂದಿ ಪ್ರಾಣ ಬಿಟ್ಟಿದ್ದಾರೆ.

ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ

ಭಾರತದಲ್ಲಿ ಒಟ್ಟು 2,84,41,986 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,63,90,584 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,37,989 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 17,13,413 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ 21 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ

ದೇಶದಲ್ಲಿ ಒಂದೇ ದಿನ 21 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ

ಭಾರತದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 21,59,873 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,37,82,648 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮೂರು ಹಂತ

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮೂರು ಹಂತ

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ದೇಶದಲ್ಲಿ 22 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ 22 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,10,43,693 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಮೇ 1ರಿಂದ ಈವರೆಗೂ 2,25,40,803 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 59,052 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 99,11,519 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,14,165 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,58,39,812 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,76,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,78,25,793 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,09,67,786 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,93,85,071 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,89,41,698 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
134154 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X