ಭಾರತ; 24 ಗಂಟೆಯಲ್ಲಿ 14,264 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಫೆಬ್ರವರಿ 21; ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,264 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 11,667 ಜನರು ಕಳೆದ ಸೋಂಕಿನಿಂದ ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 24 ಗಂಟೆಯಲ್ಲಿ 90 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,56,302ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,09,91,651. ಇದುವರೆಗೂ 1,06,89,715 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,45,634.
ದೇಶದಲ್ಲಿ ಫೆಬ್ರವರಿ 20ರ ತನಕ 21,09,31,530 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ. ಫೆಬ್ರವರಿ 20ರಂದು 6,70,050 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಶನಿವಾರ ಮಹಾರಾಷ್ಟ್ರದಲ್ಲಿ 6,281, ಕೇರಳದಲ್ಲಿ 4,650 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,93,913. ಸಕ್ರಿಯ ಪ್ರಕರಣಗಳು 48,439. ಕೇರಳದಲ್ಲಿ ಒಟ್ಟು ಪ್ರಕರಣ 10,30,588 ಮತ್ತು ಸಕ್ರಿಯ ಪ್ರಕರಣ 58,609.
ಭಾರತದಲ್ಲಿ ಶನಿವಾರದ ತನಕ 1,10,85,173 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.












Click it and Unblock the Notifications