ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಡ್ಗಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ ದುರುಳರು

|
Google Oneindia Kannada News

ಭೋಪಾಲ್, ಡಿಸೆಂಬರ್ 9: ಇತ್ತೀಚೆಗಷ್ಟೇ ಭೋಪಾಲ್ ನಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯಲು ಹೊರಟಿದ್ದ ತರುಣಿ ಮೇಲೆ ಸಾಮೂಹಿಕ ಅತ್ಯಾಚಾರದ ಕರಾಳ ನೆನಪುಗಳು ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ದೆವಾಲ್ ಗ್ರಾಮದಲ್ಲಿ ಇಬ್ಬರು ದುರುಳರು 14 ವರ್ಷದ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಬಳಿಕ ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಯುಪಿಎಸ್ಸಿ ಪರೀಕ್ಷೆ ಬರೆಯಲು ಹೊರಟ ತರುಣಿ ಮೇಲೆ ಸಾಮೂಹಿಕ ಅತ್ಯಾಚಾರಯುಪಿಎಸ್ಸಿ ಪರೀಕ್ಷೆ ಬರೆಯಲು ಹೊರಟ ತರುಣಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಸಂತ್ರಸ್ತೆಯ ದೇಹ ಅರ್ಧದಷ್ಟು ಸುಟ್ಟು ಹೋಗಿದ್ದು, ಆಕೆಯನ್ನು ಬುಂದೇಲ್ ಖಂಡ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಂಗಾರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಹೇಂದ್ರ ಸಿಂಗ್ ಧಾಕಡ್ ತಿಳಿಸಿದ್ದಾರೆ.

14-year-old girl gang raped, set on fire in Sagar at MP

ಆರೋಪಿಗಳಾದ ಸರ್ವೇಶ್ ಸೇನ್ (21) ಹಾಗೂ ಮತ್ತೊಬ್ಬ ಆರೋಪಿ ಯುವತಿ ಹುಡುಗಿಯ ಮನೆಗೆ ಹೋಗಿದ್ದು, ಆಕೆ ನಿದ್ದೆ ಮಾಡುತ್ತಿದ್ದ ವೇಳೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಸಂತ್ರಸ್ತೆ ಅಳುತ್ತಾ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ. ಆಗ ಆರೋಪಿಗಳು ಆಕೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಇಬ್ಬರು ಆರೋಪಿಗಳ ಪೈಕಿ ಸರ್ವೇಶ್ ನನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 376ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಮತ್ತೊಬ್ಬ ತಲೆ ಮರಿಸಿಕೊಂಡಿದ್ದು, ಆತನಿಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸ್ ವರಿಷ್ಠಧಿಕಾರಿ ಶುಕ್ಲಾ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯರ (12 ವರ್ಷದೊಳಗಿನ) ಮೇಲೆ ಅತ್ಯಾಚಾರ ಎಸಗುವ ಆರೋಪಿಗೆ ಮರಣದಂಡನೆ ಶಿಕ್ಷೆ ಮಸೂದೆಯನ್ನು ಮಧ್ಯಪ್ರದೇಶ ಸರ್ಕಾರ ಅಂಗೀಕರಿಸಿದೆ. ಆದರೂ ಇಂತಹ ನೀಚ ಕೃತ್ಯಗಳು ಪದೇ-ಪದೇ ನಡೆಯುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

English summary
Barely a week after the Madhya Pradesh government passed a bill in assembly recommending death sentence for rape of children, a schoolgirl in Sagar was gang-raped by two men, who then poured kerosene on her and set her on fire when she shouted for help.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X