ಯುಪಿ: ಹಾಡು ಹಗಲಲ್ಲೇ 14 ಪುಂಡರಿಂದ ಮಹಿಳೆಯರ ಮೇಲೆ ದೌರ್ಜನ್ಯ

ರಾಂಪುರ, ಮೇ 29: ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಸಂದರ್ಭ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಻ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಻ಇಂಥಹದ್ದೇ ಅಘಾತಕಾರಿ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

ಹಗಲು ಹೊತ್ತಿನಲ್ಲಿ 14 ಜನ ಪುಂಡರು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವೀಡಿಯೊ ಮಾಡಿದ್ದಾರೆ. ಇಲ್ಲಿನ ತಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

14 youths molesting two girls in broad daylight in Uttar Pradesh.

ರಾಂಪುರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರನ್ನು ತಡೆದ 14 ಯುವಕರ ತಂಡ ಅವರ ಬಳಿ ಅಸಭ್ಯವಾಗಿ ವರ್ತಿಸಿದೆ. ಜತೆಗೆ ಈ ಮಹಿಳೆಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಅದನ್ನು ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿ ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ.

ಮಹಿಳೆಯರ ಮೈಮುಟ್ಟುತ್ತಾ, ಅವರನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ ಈ ವೀಡಿಯೋದ ಮೂಲ ಪತ್ತೆಯಾಗಿರಲಿಲ್ಲ. ಇದೀಗ ಪೊಲೀಸರು ಘಟನೆಯಲ್ಲಿ ಒಳಗೊಂಡಿರುವ ವ್ಯಕ್ತಿಗಳನ್ನು ಗುರುತಿಸಿ, ಪ್ರಮುಖ ಅರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಎಫ್‌ಐಆರ್ ಕೂಡಾ ದಾಖಲಿಸಲಾಗಿದೆ.

"14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮುಖ್ಯ ಆರೋಪಿ ಶಹನವಾಜ್ ನನ್ನು ಬಂಧಿಸಿದ್ದೇವೆ. ತನಿಖೆ ಪ್ರಗತಿಯಲ್ಲಿದೆ," ಎಂದು ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಅರವಿಂದ್ ಕುಮಾರ್ ಲಕ್ನೊದಲ್ಲಿ ಹೇಳಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 354A ಮತ್ತು 354B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಆದಿತ್ಯನಾಥ್, "ಈ ಘಟನೆ ದುರದೃಷ್ಟಕರ. ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಿ," ಎಂದು ಖಡಕ್ ಆದೇಶ ನೀಡಿದ್ದಾರೆ.

ಇನ್ನು ಬಂಧಿತರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+