Get Updates
Get notified of breaking news, exclusive insights, and must-see stories!

'15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಾರ್ಖಾನೆಗೆ ಮರುಜೀವ'

ಮಂಡ್ಯ,ಡಿಸೆಂಬರ್‌ 23: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

15 000 Crore Revival Plan for Bhadravati M Visvesvaraya Factory announces HD Kumaraswamy

ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು. ಸಾವಿರಾರು ಜನರಿಗೆ ಅಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಅಂತಹ ವೈಭವದ ದಿನಗಳು ಮರುಕಳಿಸುವ ದಿನಗಳು ದೂರವಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕಿನಂತಹ ಎರಡು ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಎರಡೂ ಜವಾಬ್ದಾರಿಗಳನ್ನು ನಾನು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿಯವರು ಹೇಳಿದರು.

ಮಂಡ್ಯದ ಕೆಆರ್ ಎಸ್ ಬಳಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಮಾಡಿದ ಮನವಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಈ ಬಗ್ಗೆ ಪರಿಶೀಲನೆ ಮಾಡೋಣ. ಸಂಬಂಧಪಟ್ಟ ಕೇಂದ್ರ ಸಚಿವರ ಜತೆ ಖಂಡಿತಾ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಈಗಾಗಲೇ ಒಂದು ಐಐಟಿ ಸ್ಥಾಪನೆಯಾಗಿದೆ, ಇನ್ನೊಂದು ಐಐಟಿ ಬರಲಿ, ಬರಬೇಕು ಕೂಡ. ಎಲ್ಲರೂ ಒಟ್ಟಿಗೆ ಪ್ರಯತ್ನ ಮಾಡಿ ರಾಜ್ಯಕ್ಕೆ ಮತ್ತೊಂದು ಐಐಟಿ ತರೋಣ. ಅದಕ್ಕೆ ಎಲ್ಲರ ಸಹಕಾರ ಇರಲಿ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡತನ, ಅಪ್ಪಟ ಕನ್ನಡಿಗರೇ ಇರುವ ಜಿಲ್ಲೆ. ನಾನು ಕೇಂದ್ರ ಸಚಿವನಾಗಿ ನಾನು ಇಲ್ಲಿಗೆ ಬಂದಿಲ್ಲ, ಅಪ್ಪಟ ಕನ್ನಡಿಗನಾಗಿ, ಸಾಮಾನ್ಯ ಕನ್ನಡಿಗನಾಗಿ ಇಲ್ಲಿಗೆ ಬಂದಿದ್ದೇನೆ. ಸಮ್ಮೇಳನದಲ್ಲಿ ಭಾಗಿಯಾಗಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

ಸಮ್ಮೇಳನ ಸರ್ವಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ಸಮ್ಮೇಳನದ ಪ್ರಧಾನ ಭಾಷಣದಲ್ಲಿ ಅನೇಕ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ. ನಾಡಿಗೆ ಅವರು ಕೊಟ್ಟಿರುವ ಸಂದೇಶಗಳನ್ನು ಜಾರಿಗೆ ತರಬೇಕು, ಅದು ಆಡಳಿತ ನಡೆಸುವವರ ಕರ್ತವ್ಯ. ಅವರ ಆಶಯಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವುದು ನನ್ನ ಬಲವಾದ ಒತ್ತಾಸೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ತ್ರಿಭಾಷಾ ಸೂತ್ರಕ್ಕಿಂತ ದ್ವಿಭಾಷಾ ಸೂತ್ರ ಅಗತ್ಯ ಎಂದು ಸಮ್ಮೇಳನ ಅಧ್ಯಕ್ಷರು ಪ್ರತಿಪಾದಿಸಿದ್ದಾರೆ. ಆದರೆ, ಗ್ರಾಮಿಣ ಪ್ರದೇಶದ ಪೋಷಕರಿಗೆ ಬೃಹತ್ತಾದ ಸವಾಲು ಇದೆ. ಒಂದು ಕಡೆ ತಮ್ಮ ಮಾತೃಭಾಷೆ ಕನ್ನಡವನ್ನು ಉಳಿಸಬೇಕು, ಇನ್ನೊಂದು ಕಡೆ ಜಾಗತಿಕ ಓಟಕ್ಕೆ ಅನುಗುಣವಾಗಿ ತಮ್ಮ ಮಕ್ಕಳ ಭವಿಷ್ಯವನ್ನೂ ಕಟ್ಟಿಕೊಡಬೇಕು. ಇಂತಹ ತಳಮಳ, ಸವಾಲು, ಆತಂಕದಲ್ಲಿ ಪೋಷಕರು ಇದ್ದಾರೆ. ಅದಕ್ಕೆ ಪರಿಹಾರವೇನು ಎಂಬ ಬಗ್ಗೆ ನಾವೆಲ್ಲರೂ ಆಲೋಚನೆ ಮಾಡಬೇಕು ಎಂದು ಎಂದು ಹೇಳಿದರು.

ಕೆಆರ್ ಎಸ್, ಮೈಸೂರು ಭಾಗದಲ್ಲಿ ಐಐಟಿ ತೆರೆಯುವಂತೆ ಮನವಿ

ಕೆಆರ್ ಎಸ್ ಅಥವಾ ಮೈಸೂರು ಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ತೆರೆಯುವಂತೆ ಶಾಸಕ ದಿನೇಶ್ ಗೂಳಿಗೌಡ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು. ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿನೇಶ್ ಗೌಡ ಅವರು ಜಿಲ್ಲೆಯಲ್ಲಿ ಐಐಟಿ ತೆರೆಯುವ ಬಗ್ಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ದಿನೇಶ್ ಗೂಳಿಗೌಡ ಅವರ ಮನವಿ ಮೇರೆಗೆ ಕೆಆರ್ ಎಸ್ ಅಥವಾ ಮೈಸೂರು ಭಾಗದಲ್ಲಿ ಐಐಟಿ ತೆರೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸಮಾರಂಭದ ಬಳಿಕ ಮಾತನಾಡಿದ ದಿನೇಶ್ ಗೂಳಿಗೌಡ ಅವರು, ಕೆಆರ್ ಎಸ್ ಅಥವಾ ಮೈಸೂರು ಭಾಗದಲ್ಲಿ ಐಐಟಿ ಸ್ಥಾಪನೆ ಆಗಬೇಕು ಎಂಬುದು ನಮ್ಮ ಇಂಗಿತ. ಹೀಗಾಗಿ ಈ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಐಐಟಿ ತೆರೆಯುವ ಕುರಿತು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+