ನೀಟ್ ಪರೀಕ್ಷೆ ಬರೆಯಲಿದ್ದಾರೆ 15.97 ಲಕ್ಷ ವಿದ್ಯಾರ್ಥಿಗಳು
ನವದೆಹಲಿ, ಸೆಪ್ಟೆಂಬರ್ 13: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಭಾನುವಾರ ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ. ದೇಶಾದ್ಯಂತೆ 15 ಲಕ್ಷ ವಿದ್ಯಾರ್ಥಿಗಳು ಕೋವಿಡ್ ಭೀತಿಯ ನಡುವೆಯೇ ಪರೀಕ್ಷೆ ಬರೆಯುತ್ತಿದ್ದಾರೆ.
ಹಲವಾರು ಸುತ್ತಿನ ಚರ್ಚೆಗಳ ಬಳಿಕ ಅಂತಿಮವಾಗಿ ಭಾನುವಾರ ನೀಟ್ ಪರೀಕ್ಷೆ ನಡೆಯಲಿದೆ. ಕೋವಿಡ್ ಪರಿಸ್ಥಿತಿಯಲ್ಲಿ ನೀಟ್ ಪರೀಕ್ಷೆ ನಡೆಸುವುದು ಬೇಡ ಎಂಬ ಚರ್ಚೆ ಜೋರಾಗಿತ್ತು. 15.97 ಲಕ್ಷ ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯುತ್ತಿದ್ದಾರೆ.
ಕೋವಿಡ್ ಪರಿಸ್ಥಿತಿಯಲ್ಲಿ ಪರೀಕ್ಷಗಳನ್ನು ನಡೆಸಲಾಗುತ್ತಿದೆ. ಎನ್ಟಿಎ ಸಾಮಾಜಿಕ ಅಂತರವನ್ನು ಕಾಪಾಡಲು ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2,546ರಿಂದ 3,843ಕ್ಕೆ ಏರಿಕೆ ಮಾಡಿದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಬಹುದಾಗಿದೆ.

ನೀಟ್ ಪರೀಕ್ಷೆ 2020 ಮಧ್ಯಾಹ್ನ 2ಗಂಟೆಗೆ ಆರಂಭವಾದಲಿದೆ. ಒಟ್ಟು 3 ಗಂಟೆಗಳ ಕಾಲ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷೆ ಬರೆಯುವವರು ಸಾಧಾರಣ ಚಪ್ಪಲಿಗಳನ್ನು ಧರಿಸಬೇಕು. ಶೂ ಧರಿಸುವಂತಿಲ್ಲ, ಅರ್ಧ ಕೈಯ ಅಂಗಿಯನ್ನು ಧರಿಸುವಂತೆ ಸೂಚಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವಂತಿಲ್ಲ.
ಇಂದು ನೀಟ್ ಪರೀಕ್ಷೆಯನ್ನು ಎದುರಿಸುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ನನ್ನ ತುಂಬು ಹೃದಯದ ಶುಭ ಹಾರೈಕೆಗಳು. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಧೈರ್ಯದಿಂದ ಪರೀಕ್ಷೆ ಬರೆಯಿರಿ. #NEET
— Dr. G Parameshwara (@DrParameshwara) September 13, 2020


Click it and Unblock the Notifications
