Get Updates
Get notified of breaking news, exclusive insights, and must-see stories!

ಕೇರಳದ ಮಲಪ್ಪುರಂನಲ್ಲಿ ಪ್ರವಾಸಿಗರ ದೋಣಿ ಮುಳುಗಿ 15 ಸಾವು, ಮೃತರಲ್ಲಿ ಹೆಚ್ಚಿನವರು ಮಕ್ಕಳು

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ರಾತ್ರಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಹೆಚ್ಚಿನವರು ಮಕ್ಕಳು ಎಂದು ವರದಿಯಾಗಿದೆ.

ಸಂತ್ರಸ್ತರಲ್ಲಿ ಕನಿಷ್ಠ ಆರು ಮಕ್ಕಳು ಮತ್ತು ನಾಲ್ವರು ಮಹಿಳೆಯರೂ ಸೇರಿದ್ದಾರೆ. ಘಟನೆ ವರದಿಯಾದ ತಕ್ಷಣ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಡಬಲ್ ಡೆಕ್ಕರ್ ಬೋಟ್ ಸುಮಾರು 40 ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

15 dead after tourist boat capsize accident in Keralas Malappuram

ಮೂಲಗಳ ಪ್ರಕಾರ, ಸಂಜೆ 7:00 ಗಂಟೆಗೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕೇರಳ ಸಚಿವ ಸಂಪುಟದ ಸಚಿವರು ಕೂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದ್ದಾರೆ. ಇದುವರೆಗೆ ಕನಿಷ್ಠ 10 ಮಂದಿಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ನೀರಿನಿಂದ ಹೊರತೆಗೆದವರನ್ನು ಸಮೀಪದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾತ್ರಿ ಸಮಯದಲ್ಲಿ ಸಾಕಷ್ಟು ಬೆಳಕು ಇಲ್ಲದ ಕಾರಣ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.

ಈ ಘಟನೆಯು ಕೇರಳದ ದೋಣಿ ಪ್ರವಾಸೋದ್ಯಮದ ಸುತ್ತಲಿನ ನಿಯಮಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಏಕೆಂದರೆ ಮನರಂಜನಾ ದೋಣಿಗಳು ಸಂಜೆ 5:00 ರವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಆದರೆ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಬಲ್ ಡೆಕ್ಕರ್ ಬೋಟ್ ಕೂಡ ಕಿಕ್ಕಿರಿದಿತ್ತು ಎಂದಿದ್ದಾರೆ.

ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್, ಪ್ರವಾಸೋದ್ಯಮ ಸಚಿವ ಪಿ ಎ ಮೊಹಮದ್ ರಿಯಾಸ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದ್ದಾರೆ. "ಇನ್ನಷ್ಟು ಸಂತ್ರಸ್ತರು ದೋಣಿಯಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಬೋಟ್ ಪಲ್ಟಿಯಾಗಲು ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಅದರ ಬಗ್ಗೆ ತನಿಖೆ ನಡೆಸಲಿದ್ದಾರೆ" ಎಂದು ಪ್ರವಾಸೋದ್ಯಮ ಸಚಿವ ಪಿಟಿಐಗೆ ತಿಳಿಸಿದರು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+