ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 15 ಲಕ್ಷ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಲಸಿಕೆ

|
Google Oneindia Kannada News

ನವದೆಹಲಿ, ಜನವರಿ.24: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನದ ವೇಗ ಹೆಚ್ಚಿಸಲಾಗುತ್ತಿದೆ. ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ಆರೋಗ್ಯ ಸಿಬ್ಬಂದಿಯ ಆತಂಕದ ನಡುವೆಯೂ 11 ದಿನಗಳಲ್ಲೇ 15 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಿರುವುದು ಹೊಸ ದಾಖಲೆಯಾಗಿದೆ.

ಕಳೆದ 11 ದಿನಗಳಲ್ಲೇ 15 ಲಕ್ಷ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

ಲಸಿಕೆ ಪಡೆದ 5 ದಿನಗಳ ನಂತರ ವೈದ್ಯಕೀಯ ಸಿಬ್ಬಂದಿ ಸಾವು: ಕಾರಣ ಬಯಲುಲಸಿಕೆ ಪಡೆದ 5 ದಿನಗಳ ನಂತರ ವೈದ್ಯಕೀಯ ಸಿಬ್ಬಂದಿ ಸಾವು: ಕಾರಣ ಬಯಲು

ಕಳೆದ ಜನವರಿ.16ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು. ಶನಿವಾರದ ಅಂಕಿ-ಅಂಶಗಳ ಪ್ರಕಾರ, 15,37,190 ಕೊರೊನಾ ಯೋಧರಿಗೆ ಲಸಿಕೆ ನೀಡಲಾಗಿದೆ. ದೇಶಾದ್ಯಂತ 27,776 ಕೊವಿಡ್-19 ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಲಸಿಕೆ ಹಾಕಿಸಿಕೊಂಡ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ

ಲಸಿಕೆ ಹಾಕಿಸಿಕೊಂಡ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ

ಕಳೆದ 24 ಗಂಟೆಗಳಲ್ಲೇ ಲಸಿಕೆ ಹಾಕಿಸಿಕೊಂಡ ವೈದ್ಯಕೀಯ ಸಿಬ್ಬಂದಿ ಪೈಕಿ ಒಬ್ಬರು ಅಸ್ವತ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣ ಪತ್ತೆಯಾಗಿದೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನವರಿ.20ರಂದು ಈ ವ್ಯಕ್ತಿ ಲಸಿಕೆ ಪಡೆದುಕೊಂಡದ್ದರು ಎಂದು ತಿಳಿದು ಬಂದಿದೆ. ಮೊದಲ ದಿನದಿಂದ ಈವರೆಗೂ ದೇಶದಲ್ಲಿ ಕೊರೊನಾ ಲಸಿಕೆ ಪಡೆದ 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು ಲಸಿಕೆ ಪಡೆದವರಲ್ಲಿ ಶೇ.0.0007ರಷ್ಟು ಜನರು ಅಸ್ವಸ್ಥಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗುರುಗ್ರಾಮ್ ನಲ್ಲಿ ಮಹಿಳೆ ಸಾವಿಗೆ ಲಸಿಕೆ ಕಾರಣವೇ?

ಗುರುಗ್ರಾಮ್ ನಲ್ಲಿ ಮಹಿಳೆ ಸಾವಿಗೆ ಲಸಿಕೆ ಕಾರಣವೇ?

ಕಳೆದ 24 ಗಂಟೆಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಮಹಿಳೆಯೊಬ್ಬರು ಮೃತಪಟ್ಟಿರುವ ಪ್ರಕರಣ ವರದಿಯಾಗಿದೆ. "ಗುರುಗ್ರಾಮ್ ಮೂಲದ 56 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಮಹಿಳೆಯು ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಮಹಿಳೆ ಸಾವಿಗೂ ಕೊವಿಡ್-19 ಲಸಿಕೆಯೂ ಯಾವುದೇ ರೀತಿಯಾದ ಸಂಬಂಧವಿಲ್ಲ" ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಲಸಿಕೆ ಸ್ವೀಕರಿಸಿದ ನಂತರ ಮೃತಪಟ್ಟವರು ಆರು ಜನ

ಲಸಿಕೆ ಸ್ವೀಕರಿಸಿದ ನಂತರ ಮೃತಪಟ್ಟವರು ಆರು ಜನ

ದೇಶದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ನಂತರದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆಯು 6ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು, ಉತ್ತರ ಪ್ರದೇಶದಲ್ಲಿ ಒಂದು, ತೆಲಂಗಾಣ ಒಂದು, ರಾಜಸ್ಥಾನದಲ್ಲಿ ಒಬ್ಬರು ಹಾಗೂ ಗುರುಗ್ರಾಮ್ ನಲ್ಲಿ ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಆದರೆ ಈ ಪೈಕಿ ಯಾವುದೇ ಪ್ರಕರಣದಲ್ಲಿ ಲಸಿಕೆಯಿಂದಾಗಿಯೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬುದು ಖಾತ್ರಿಯಾಗಿಲ್ಲ. ಲಸಿಕೆ ನಂತರದಲ್ಲಿ ಬೇರೆ ರೀತಿಯ ಆರೋಗ್ಯ ಸಮಸ್ಯೆಯಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ.

ದೇಶಾದ್ಯಂತ 30 ಕೋಟಿ ಲಸಿಕೆ ವಿತರಣೆ ಗುರಿ

ದೇಶಾದ್ಯಂತ 30 ಕೋಟಿ ಲಸಿಕೆ ವಿತರಣೆ ಗುರಿ

ಮೊದಲ ಹಂತದಲ್ಲಿ ದೇಶದ 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ವಿಶ್ವದಾದ್ಯಂತ ಕೊರೊನಾವೈರಸ್ ಸೋಂಕಿನ ವಿರುದ್ಧ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಜಗತ್ತಿನಲ್ಲೇ ಮೊದಲ ಬಾರಿಗೆ ಕ್ಷಿಪ್ರಗತಿಯಲ್ಲಿ ಲಸಿಕೆ ಅಭಿಯಾನ ನಡೆಸಲಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಮತ್ತು ಇಸ್ರೇಲ್ ನಲ್ಲಿ 10 ಲಕ್ಷ ಜನರಿಗೆ ಲಸಿಕೆ ನೀಡಲು 10 ದಿನಗಳನ್ನು ತೆಗೆದುಕೊಳ್ಳಲಾಗಿದೆ.

English summary
15 Lakh Health Workers Are Vaccinated In Just 11 Days At India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X