ಭಾರತ: 2ನೇ ಅಲೆಯಲ್ಲೇ ಕೊರೊನಾವೈರಸ್ ಹೊಸ ದಾಖಲೆ

ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಆರಂಭವಾದ 50 ದಿನಗಳ ಬಳಿಕ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಇಳಿಕೆ ಕಂಡು ಬಂದಿದೆ. ದೇಶದಲ್ಲಿ ಒಂದು ವಾರದ ಪಾಸಿಟಿವಿಟಿ ದರ ಶೇ.9.07ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,38,022 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,128 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,80,47,534 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,56,92,342 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,29,100 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 20,26,092 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

152734 New Coronavirus Cases Reported in India in the Last 24 Hours

20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು ತಪಾಸಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 16,83,135 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ34,48,66,883 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಮೂರು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಇದುವರೆಗೂ 21,31,54,129 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+