ಭಾರತದಲ್ಲಿ 15,590 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜನವರಿ 15: ಭಾರತದಲ್ಲಿ ಇಂದು 15,590 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ 8 ಗಂಟಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,590 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 8 ದಿನಗಳಿಂದಲೂ ದಿನಕ್ಕೆ ಸರಾಸರಿ 20 ಸಾವಿರಕ್ಕಿಂತಲೂ ಕಡಿಮೆ ಹೊಸ ಪ್ರಕರಣಗಳು ದಾಖಲಾಗುತ್ತಿವೆ.

ಲಸಿಕೆ ಅಭಿಯಾನಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಭಾರತದಲ್ಲಿ ಒಂದೇ ದಿನ 8,36,227 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,34,89,114 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

15,590 New Covid-19 Cases And 191 Deaths Reported In India In The Last 24 Hours

24 ಗಂಟೆಗಳಲ್ಲಿ 15,590 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,05,27,683ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 191 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 1,51,918ಕ್ಕೆ ತಲುಪಿದೆ.

ಈ ನಡುವೆ ಒಟ್ಟಾರೆ 1,05,27,683 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 15,975 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,01,62,738ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,13,027 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+