ಭಾರತದಲ್ಲಿ ಒಂದೇ ದಿನ 15,968 ಮಂದಿಗೆ ಕೊರೊನಾವೈರಸ್ ಪಾಸಿಟಿವ್!
ನವದೆಹಲಿ, ಜೂನ್.24: ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಅಟ್ಟಹಾಸ ಮುಂದುವರಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡು ಬರುತ್ತಿದೆ. ಕಳೆದ ಒಂದೇ ದಿನದಲ್ಲಿ 15,968 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.
Recommended Video
ದೇಶದಲ್ಲಿರುವ ನೊವೆಲ್ ಕೊರೊನಾವೈರಸ್ ಒಟ್ಟು ಸೋಂಕಿತರು ಹಾಗೂ ಮೃತಪಟ್ಟವರ ಕುರಿತು ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ನೊವೆಲ್ ಕೊರೊನಾವೈರಸ್ ಮಹಾಮಾರಿಗೆ 465 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರಿಂದ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 14,476ಕ್ಕೆ ಏರಿಕೆಯಾಗಿದೆ. ಇನ್ನು, ಒಟ್ಟು ಸೋಂಕಿತರ ಸಂಖ್ಯೆಯು 4,56,183ಕ್ಕೆ ಏರಿಕೆಯಾಗಿದೆ. ಈ ಪೈಕಿ 2,58,685 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಕಿ ಉಳಿದ 1,83,022 ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಭಾರತದಲ್ಲಿ 73.52 ಲಕ್ಷ ಜನರ ಮಾದರಿ ತಪಾಸಣೆ:
ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆಯುಳ್ಳ ರಾಷ್ಟ್ರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ವೈದ್ಯಕೀಯ ತಪಾಸಣೆ ವೇಗವನ್ನು ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿನಿತ್ಯ 2 ಲಕ್ಷಕ್ಕಿಂತ ಅಧಿಕ ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದರು. ಅದರಂತೆ ಕಳೆದ 24 ಗಂಟೆಗಳಲ್ಲಿ ಐಸಿಎಂಆರ್ ನಲ್ಲಿ 2,15,195 ಮಂದಿ ಮಾದರಿಯನ್ನು ತಪಾಸಣೆ ನಡೆಸಲಾಯಿತು. ಜೂನ್.23ರವರೆಗೂ ದೇಶದಲ್ಲಿ ಬರೋಬ್ಬರಿ 73,52,911 ಜನರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.












Click it and Unblock the Notifications