• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.31 ಲಕ್ಷಕ್ಕೆ ಇಳಿಕೆ

|

ನವದೆಹಲಿ, ಜನವರಿ 5: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,375 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಸೋಮವಾರ 201 ಮಂದಿ ವೈರಸ್‌ನಿಂದ ಮೃತಪಟ್ಟಿದ್ದಾರೆ. 29,091 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆಯುಂಟಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು 2,31,036ಕ್ಕೆ ಇಳಿಕೆಯಾಗಿದೆ. ಒಟ್ಟು ಪ್ರಕರಣಗಳು 1,03,56,845ಕ್ಕೆ ತಲುಪಿದ್ದು, ಇದುವರೆಗೂ 99,75,958 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಸಂಖ್ಯೆ 1,49,850ಗೆ ತಲುಪಿದೆ.

ಭಾರತದಲ್ಲಿ ಕೋವಿಶೀಲ್ಡ್ ಕೊರೊನಾ ಲಸಿಕೆ ಬೆಲೆ ಎಷ್ಟಿದೆ?

ಜನವರಿ 4ರವರೆಗೂ 17,65,31,997 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಮವಾರ ಒಂದೇ ದಿನ 8,96,236 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ದೇಶದಲ್ಲಿ ಕಳೆದ ಒಂದು ವಾರದಿಂದ ದಾಖಲಾದ ಒಟ್ಟು ಪ್ರಕರಣಗಳಲ್ಲಿ ಶೇ 44ರಷ್ಟು ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಪತ್ತೆಯಾಗಿವೆ. ಪ್ರತಿ ಐದು ಹೊಸ ಪ್ರಕರಣಗಳಲ್ಲಿ ಎರಡಕ್ಕಿಂತ ಹೆಚ್ಚು ಪ್ರಕರಣಗಳು ಕೇರಳ ಅಥವಾ ಮಹಾರಾಷ್ಟ್ರದಲ್ಲಿ ದಾಖಲಾಗುತ್ತಿದೆ.

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧ: ಡಾ ಸುಧಾಕರ್

ಬ್ರಿಟನ್‌ನಲ್ಲಿ ಕೊರೊನಾ ವೈರಸ್ ರೂಪಾಂತರದ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಆರು ವಾರಗಳ ಕಾಲ ಕಠಿಣ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಅಲ್ಲಿ ಒಂದೇ ದಿನ 58,784 ಪ್ರಕರಣಗಳು ದಾಖಲಾಗಿದ್ದು, ಇದು ಕೊರೊನಾ ಸಾಂಕ್ರಾಮಿಕ ಶುರುವಾದ ದಿನದಿಂದ ದಾಖಲಾದ ಅತ್ಯಧಿಕ ಪ್ರಕರಣವಾಗಿದೆ. ಸತತ ಏಳನೇ ದಿನ ಬ್ರಿಟನ್‌ನಲ್ಲಿ 50 ಸಾವಿರಕ್ಕಿಂತ ಅಧಿಕ ಪ್ರಕರಣಗಳು ವರದಿಯಾಗಿವೆ.

English summary
16,375 new coronavirus cases were reported in India. 201 people died due to virus in last 24 hours and 29,091 got discharged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X