ಉತ್ತರ ಸಿಕ್ಕಿಂನಲ್ಲಿ ಕಂದಕಕ್ಕೆ ಬಿದ್ದ ಸೇನಾ ಟ್ರಕ್: 16 ಸೈನಿಕರು ಹುತಾತ್ಮ, ನಾಲ್ವರಿಗೆ ಗಾಯ
ನವದೆಹಲಿ, ಡಿ. 23: ಉತ್ತರ ಸಿಕ್ಕಿಂನಲ್ಲಿ ಸೇನಾ ಟ್ರಕ್ ಕಮರಿಗೆ ಬಿದ್ದು 3 ಸೇನಾ ಅಧಿಕಾರಿಗಳು, 13 ಯೋಧರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಸೇನಾ ಟ್ರಕ್ ಉತ್ತರ ಸಿಕ್ಕಿಂನ ಝೀಮಾದಲ್ಲಿ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿದಂತೆ 16 ಸೈನಿಕರು ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
Deeply pained by the loss of lives of the Indian Army personnel due to a road accident in North Sikkim.
— Rajnath Singh (@rajnathsingh) December 23, 2022
The nation is deeply grateful for their service and commitment. My condolences to the bereaved families. Praying for the speedy recovery of those who are injured.
ಇದು 3 - ವಾಹನದ ಬೆಂಗಾವಲು ಪಡೆಯ ಭಾಗವಾಗಿತ್ತು ಎಂದು ಸೇನೆಯು ಹೇಳಿದ್ದು, ಈ ಬೆಂಗಾವಲು ಪಡೆ ಬೆಳಗ್ಗೆ ಚಟೆನ್‌ನಿಂದ ಥಾಂಗು ಕಡೆಗೆ ಪ್ರಯಾಣಿಸುತ್ತಿತ್ತು. ಝೆಮಾ ಮಾರ್ಗದಲ್ಲಿ, ಟ್ರಕ್ ತೀಕ್ಷ್ಣವಾದ ತಿರುವಿನಲ್ಲಿ ಇದ್ದಾಗ ಕಡಿದಾದ ಇಳಿಜಾರಿನ ಕೆಳಗೆ ಜಾರಿ, ಕಂದರಕ್ಕೆ ಬಿದ್ದಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಗಾಯಗೊಂಡ ನಾಲ್ವರು ಸೈನಿಕರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ದುರಂತ ಘಟನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. 'ಸೇನಾ ಸಿಬ್ಬಂದಿ ಸೇವೆ ಮತ್ತು ಬದ್ಧತೆಗೆ ದೇಶವೇ ಕೃತಜ್ಞವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ಸಿಕ್ಕಿಂನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ವೀರ ಸೈನಿಕರು ಹುತಾತ್ಮರಾಗಿರುವುದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ.
"ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ರಾಷ್ಟ್ರಪತಿ ಭವನದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.












Click it and Unblock the Notifications