ಭಾರತದಲ್ಲೂ ಭಯ: ದಿನೇ ದಿನೆ ಹೆಚ್ಚಿದ ಕೊರೊನಾವೈರಸ್ ಪ್ರಕರಣ!

ನವದೆಹಲಿ, ಫೆಬ್ರವರಿ.25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಒಂದೇ ದಿನದಲ್ಲಿ 16738 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 138 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,56,705ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,10,46,914 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಒಂದು ದಿನದಲ್ಲಿ 11,799 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,07,38,501 ಜನರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ಇದರ ಹೊರತಾಗಿ 1,51,708 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

 16738 New Coronavirus Cases Reported in India in the Last 24 Hours

ಕೊರೊನಾವೈರಸ್ ಸೋಂಕಿಗೆ ಲಸಿಕೆ:

ದೇಶದಲ್ಲಿ ಈವರೆಗೂ 1,26,71,163 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,428 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,30,79,561ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 10,641 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,06,752ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 8,86,98,691 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,18,74,118 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+