ಭಾರತದಲ್ಲಿ ಒಂದೇ ದಿನ 16,764 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

ನವದೆಹಲಿ, ಡಿಸೆಂಬರ್ 31: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಯಿತಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ.

ದೇಶದಲ್ಲಿ ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 15,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 1270ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 16,764 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 220 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದು, ಇದೇ ಅವಧಿಯಲ್ಲಿ 7,585 ಸೋಂಕಿತರು ಗುಣಮುಖರಾಗಿದ್ದಾರೆ. ಡಿಸೆಂಬರ್ 31ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಈವರೆಗೂ ಕೊವಿಡ್-19 ಸೋಂಕಿನಿಂದ 4,81,080 ಮಂದಿ ಪ್ರಾಣ ಬಿಟ್ಟಿದ್ದು, 91,361 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

16764 New Covid-19 cases reported in India in the last 24 hours, Omicron Cases raised to 1270


ಭಾರತದಲ್ಲಿ 1,270 ಓಮಿಕ್ರಾನ್ ಪ್ರಕರಣ:

ದೇಶದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 1270ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ 450, ದೆಹಲಿ 320 ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿದ್ದು, ಅತಿಹೆಚ್ಚು ಪ್ರಕರಣಗಳನ್ನು ವರದಿ ಮಾಡಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿವೆ.

ಇದರ ಹೊರತಾಗಿ ಕೇರಳ 109, ಗುಜರಾತ್ 97, ರಾಜಸ್ಥಾನ 69, ತೆಲಂಗಾಣ 62, ತಮಿಳುನಾಡು 46, ಕರ್ನಾಟಕ 34, ಆಂಧ್ರ ಪ್ರದೇಶ 16, ಹರಿಯಾಣ 14 ಮತ್ತು ಪಶ್ಚಿಮ ಬಂಗಾಳದಲ್ಲಿ 11 ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಒಟ್ಟು 1270 ಓಮಿಕ್ರಾನ್ ಸೋಂಕಿತರ ಪೈಕಿ ಈವರೆಗೆ 374 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+