Breaking: ಭಾರತದಲ್ಲಿ ಒಂದೇ ದಿನ 1,68,063 ಮಂದಿಗೆ ಕೊವಿಡ್-19
ನವದೆಹಲಿ, ಜನವರಿ 11: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,68,000 ಗಡಿ ದಾಟುತ್ತಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇಕಡಾ 10.64ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 1,68,063 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 69,959 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇದೇ ಅವಧಿಯಲ್ಲಿ 277 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಗೆ ಕಾರಣವಾಗಿರುವ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಏರಿಕೆಯಾಗಿದೆ. ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯು 4,461ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ:
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 15,79,928 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 69,31,55,280 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.












Click it and Unblock the Notifications